ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆ್ಯಪ್‌’ನಲ್ಲಿ ಪರಿಚಯವಾಗಿ ಲೈಂಗಿಕ ದೌರ್ಜನ್ಯ ಎಸಗಿದ

Last Updated 21 ಮೇ 2019, 1:11 IST
ಅಕ್ಷರ ಗಾತ್ರ

ಬೆಂಗಳೂರು: ‘ಮೊಬೈಲ್ ಆ್ಯಪ್‌ ಮೂಲಕ ಪರಿಚಿತನಾಗಿ ಫಿಟ್ನೆಸ್ ತರಬೇತಿ ನೀಡಲು ಮನೆಗೆ ಬಂದಿದ್ದ ಗೋಪಾಲಕೃಷ್ಣ ಶೆಟ್ಟಿ ಎಂಬಾತ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ’ ಎಂದು ಆರೋಪಿಸಿ ಮಹಿಳೆಯೊಬ್ಬರು ಬೆಳ್ಳಂದೂರು ಠಾಣೆಗೆ ದೂರು ನೀಡಿದ್ದಾರೆ.

ಅದರನ್ವಯ ಗೋಪಾಲಕೃಷ್ಣ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ.

‘ಫಿಟ್ನೆಸ್ ತರಬೇತಿ ಪಡೆಯಲು ಇಚ್ಛಿಸಿದ್ದ ಮಹಿಳೆ, ಮೊಬೈಲ್ ಆ್ಯಪ್‌ ಮೂಲಕ ಏಪ್ರಿಲ್ 27ರಂದು ಆರೋಪಿಯನ್ನು ಸಂಪರ್ಕಿಸಿದ್ದರು. ನಿತ್ಯವೂ ಮನೆಗೆ ಬಂದು ಹೋಗುತ್ತಿದ್ದ ಆತ, ತರಬೇತಿ ನೀಡುವ ನೆಪದಲ್ಲಿ ಮೈ–ಕೈ ಹಾಗೂ ಎದೆ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ. ಕೆಲವು ಬಾರಿ ಮುತ್ತು ಕೊಡಲು ಸಹ ಪ್ರಯತ್ನಿಸಿದ್ದ. ಈ ಬಗ್ಗೆ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಆರೋಪಿಯ ವರ್ತನೆ ಹೆಚ್ಚಾಗುತ್ತಿದ್ದಂತೆ ಬೇಸತ್ತ ಮಹಿಳೆ, ಠಾಣೆಗೆ ಬಂದು ದೂರು ನೀಡಿದ್ದಾರೆ. ಆರೋಪಿ ವಿಳಾಸದ ಬಗ್ಗೆ ಅವರಿಗೆ ಯಾವುದೇ ಮಾಹಿತಿ ಇಲ್ಲ. ಆತ ಪರಿಚಯವಾಗಿದ್ದ ಆ್ಯಪ್‌ ಮೂಲಕ ವಿಳಾಸ ಪತ್ತೆ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT