ಮಂಗಳವಾರ, ಜೂನ್ 2, 2020
27 °C

ಲೈಂಗಿಕ ಕಿರುಕುಳ ನೀಡಿ ಅಪಹರಣ ಬೆದರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪರಿಚಯಸ್ಥ ಯುವಕನೊಬ್ಬ ತನಗೆ ಲೈಂಗಿಕ ಕಿರಕುಳ ನೀಡುತ್ತಿದ್ದು, ಲೈಂಗಿಕವಾಗಿ ಸಹಕರಿಸದಿದ್ದರೆ ಅಪಹರಣ ಮಾಡುವುದಾಗಿ ಬೆದರಿಕೆ ಹಾಕುತ್ತಿರುವುದಾಗಿ ಯುವತಿಯೊಬ್ಬರು ಬಾಣಸವಾಡಿ ಠಾಣೆಗೆ ದೂರು ನೀಡಿದ್ದಾರೆ.

‘25 ವರ್ಷದ ಯುವತಿ ದೂರು ನೀಡಿದ್ದಾಳೆ. ಆರೋಪಿ ನಿಶಾಂತ್ ಪಾಂಡ್ಯ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ತನ್ನ ಎರಡು ಮೊಬೈಲ್ ಸಂಖ್ಯೆಯಿಂದ ನನಗೆ ಕರೆ ಹಾಗೂ ಸಂದೇಶ ಕಳುಹಿಸುತ್ತಿರುವ ಆರೋಪಿ ವಿಪರೀತ ತೊಂದರೆ ಕೊಡುತ್ತಿದ್ದಾನೆ. ಲೈಂಗಿಕ ಕಿರುಕುಳ ನೀಡಿ ಹಿಂಸಿಸುತ್ತಿದ್ದಾನೆ’ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

‘ನಾನು ಆರೋಪಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದಾಗಿ ಆತ ನನ್ನ ಸ್ನೇಹಿತರು ಹಾಗೂ ಕಂಪನಿ ಸಹೋದ್ಯೋಗಿಗಳ ಮುಂದೆ ಅಪಪ್ರಚಾರ ಮಾಡುತ್ತಿದ್ದಾನೆ.  ಈ ಬಗ್ಗೆ ಆರೋಪಿಯನ್ನು ಪ್ರಶ್ನಿಸಿದ್ದಕ್ಕೆ, ನನ್ನನ್ನೇ ಅಪಹರಣ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ’ ಎಂದು ಎಂದೂ ದೂರಿನಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.