ಭಾನುವಾರ, ಆಗಸ್ಟ್ 9, 2020
23 °C

ವಿಳಾಸ ಕೇಳುವ ನೆಪದಲ್ಲಿ ಅನುಚಿತ ವರ್ತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದ್ವಿಚಕ್ರ ವಾಹನ ಸವಾರನೊಬ್ಬ ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿದ್ದು, ಈ ಸಂಬಂಧ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಸ್ಥಳೀಯ ನಿವಾಸಿಯಾದ ಮಹಿಳೆ ದೂರು ನೀಡಿದ್ದಾರೆ. ಅಪರಿಚಿತ ವ್ಯಕ್ತಿ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಓಎಂಬಿಆರ್ ಲೇಔಟ್ 4ನೇ ಮುಖ್ಯರಸ್ತೆಯಲ್ಲಿ ಬುಧವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಮಹಿಳೆ ನಡೆದುಕೊಂಡು ಹೊರಟಿದ್ದರು. ಸ್ಥಳಕ್ಕೆ ಬಂದಿದ್ದ ಆರೋಪಿ, ವಿಳಾಸ ಕೇಳುವ ನೆಪದಲ್ಲಿ ಮಹಿಳೆಯನ್ನು ಮಾತನಾಡಿಸಿದ್ದ. ನಂತರ ಪ್ಯಾಂಟ್ ಬಿಚ್ವಿ ಅಸಭ್ಯವಾಗಿ ವರ್ತಿಸಿದ್ದ. ಅದರಿಂದ ಗಾಬರಿಗೊಂಡ ಮಹಿಳೆ ಚೀರಾಡಿದ್ದರು. ಸ್ಥಳೀಯರು ಬರುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು