ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸ ಮುಗಿಸಿ ಮನೆಗೆ ಹೊರಟಿದ್ದ ಯುವತಿಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ

Published 13 ನವೆಂಬರ್ 2023, 15:33 IST
Last Updated 13 ನವೆಂಬರ್ 2023, 15:33 IST
ಅಕ್ಷರ ಗಾತ್ರ

ಬೆಂಗಳೂರು: ಕೆಲಸ ಮುಗಿಸಿ ಮನೆಗೆ ಹೊರಟಿದ್ದ ಯುವತಿಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದ್ದು, ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಸೌತ್‌ ಎಂಡ್ ವೃತ್ತದಲ್ಲಿ ನಡೆದಿರುವ ಘಟನೆ ಸಂಬಂಧ ಯುವತಿ ದೂರು ನೀಡಿದ್ದಾರೆ. ಅಪರಿಚಿತ ವ್ಯಕ್ತಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಕನಕಪುರ ಮುಖ್ಯರಸ್ತೆಯ ನಿವಾಸಿಯಾದ ಯುವತಿ, ಕೂಡ್ಲು ಗೇಟ್ ಬಳಿಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ನ. 6ರಂದು ರಾತ್ರಿ 10.30ರ ಸುಮಾರಿಗೆ ಕೆಲಸ ಮುಗಿಸಿದ್ದ ಯುವತಿ, ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ಹೊರಟಿದ್ದರು.’

‘ಮಾರ್ಗಮಧ್ಯೆ ಯುವತಿಯನ್ನು ನೋಡಿದ್ದ ಆರೋಪಿ, ತನ್ನ ಬೈಕ್‌ನಲ್ಲಿ ಹಿಂಬಾಲಿಸಲಾರಂಭಿಸಿದ್ದ. ಯುವತಿ ಸೌಂತ್‌ ಎಂಡ್ ವೃತ್ತಕ್ಕೆ ಬಂದಿದ್ದರು. ದಕ್ಷಿಣ ವಿಭಾಗದ ಡಿಸಿಪಿ ಕಚೇರಿ ಎದುರಿನ ರಸ್ತೆಯಲ್ಲಿ ಯುವತಿ ದ್ವಿಚಕ್ರ ವಾಹನವನ್ನು ಆರೋಪಿ ಅಡ್ಡಗಟ್ಟಿದ್ದ. ಯುವತಿ ಕೈ ಹಿಡಿದು ಎಳೆದಾಡಿದ್ದ. ಬಟ್ಟೆಯನ್ನೂ ಎಳೆಯಲು ಯತ್ನಿಸಿದ್ದ. ಜೊತೆಗೆ, ಯುವತಿಯನ್ನು ಅಶ್ಲೀಲವಾಗಿ ನಿಂದಿಸಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಯುವತಿ ರಕ್ಷಣೆಗಾಗಿ ಕೂಗಾಡಿದ್ದರು. ಅವಾಗಲೇ ಆರೋಪಿ, ಸ್ಥಳದಿಂದ ಬೈಕ್ ಸಮೇತ ಪರಾರಿಯಾಗಿದ್ದಾನೆ. ಆತ ಯಾರು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT