ಬೆಂಗಳೂರು: ಲ್ಯಾಂಗ್ಫೋರ್ಡ್ ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದ ಯುವತಿಯೊಬ್ಬರ ಅಂಗಾಂಗಗಳನ್ನು ಮುಟ್ಟಿ ಹಲ್ಲೆ ಮಾಡಲಾಗಿದ್ದು, ಈ ಬಗ್ಗೆ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಶಾಂತಿನಗರದ ನಿವಾಸಿ 22 ವರ್ಷದ ಯುವತಿ ದೂರು ನೀಡಿದ್ದಾರೆ. ಅಪರಿಚಿತ ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.

‘ಜಯನಗರದ ಕಂಪನಿಯೊಂದರ ಉದ್ಯೋಗಿ ಆಗಿರುವ ಯುವತಿ, ಭಾನುವಾರ ಬೆಳಿಗ್ಗೆ 8.10ರ ಸುಮಾರಿಗೆ ಲ್ಯಾಂಗ್ಫೋರ್ಡ್ ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಅವರನ್ನು ಹಿಂಬಾಲಿಸಿದ್ದ ಯುವಕ, ತಬ್ಬಿಕೊಂಡು ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ. ಅದನ್ನು ಪ್ರಶ್ನಿಸಿದ್ದಕ್ಕೆ, ಹಲ್ಲೆ ಮಾಡಿದ್ದ.’

‘ಯುವತಿ ರಕ್ಷಣೆಗಾಗಿ ಕೂಗಾಡಿದ್ದರು. ಸ್ಥಳೀಯರು ಬರುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಘಟನಾ ಸ್ಥಳ ಸಮೀಪದ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಸಂಗ್ರಹಿಸಿ ಪರಿಶೀಲಿಸಲಾಗುತ್ತಿದೆ’ ಎಂದೂ ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.