ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಕು ತೋರಿಸಿ ಹಣ ಸುಲಿಗೆ: ಇಬ್ಬರ ಬಂಧನ

Published 24 ಆಗಸ್ಟ್ 2024, 14:15 IST
Last Updated 24 ಆಗಸ್ಟ್ 2024, 14:15 IST
ಅಕ್ಷರ ಗಾತ್ರ

ಬೆಂಗಳೂರು: ಪಾದಚಾರಿಗಳು ಹಾಗೂ ಬೈಕ್‌ ಸವಾರರನ್ನು ಅಡ್ಡಗಟ್ಟಿ ಹಣ, ಚಿನ್ನಾಭರಣ ಸುಲಿಗೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಡಿ.ಜೆ.ಹಳ್ಳಿಯ ನಿವಾಸಿಗಳಾದ ಅಲ್ಲಾಭಕ್ಷ್‌ ಹಾಗೂ ಮೊಹಮ್ಮದ್‌ ತೌಸಿಫ್‌ ಬಂಧಿತರು. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳಿಂದ ಬೈಕ್‌ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

‘ಠಾಣಾ ವ್ಯಾಪ್ತಿಯ ತಿಗಳ ಬೀದಿಯ ವ್ಯಕ್ತಿಯೊಬ್ಬರಿಗೆ ಮೂವರು ಚಾಕು ತೋರಿಸಿ ಬೆದರಿಸಿ, ₹30 ಸಾವಿರ ಸುಲಿಗೆ ಮಾಡಿದ್ದರು. ಡಿ.ಜೆ.ಹಳ್ಳಿಯ ಮೋದಿ ರಸ್ತೆಯಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸುಲಿಗೆ ಮಾಡುತ್ತಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ಈ ರೀತಿಯ ಘಟನೆಗಳು ನಡೆದರೆ ಸಮೀಪದ ಠಾಣೆಗಳಿಗೆ ತಕ್ಷಣವೇ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT