ಭಾನುವಾರ, ಜುಲೈ 3, 2022
23 °C

ಮಾರಕಾಸ್ತ್ರ ತೋರಿಸಿ ₹6 ಲಕ್ಷ ನಗದು ಕಳ್ಳತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐವರು ದುಷ್ಕರ್ಮಿಗಳು ಏಜೆನ್ಸಿಯ ಗೋದಾಮಿಗೆ ನುಗ್ಗಿ ಅಲ್ಲಿದ್ದ ನೌಕರರಿಗೆ ಮಾರಕಾಸ್ತ್ರ ತೋರಿಸಿ ಹೆದರಿಸಿದ ಕಳ್ಳರು ₹ 6 ಲಕ್ಷ ನಗದು ಕದ್ದು ಪರಾರಿಯಾಗಿದ್ದಾರೆ. ಈ ಸಂಬಂಧ ಅನ್ನಪೂರ್ಣೇಶ್ವರಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

‘ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಸೋಮವಾರ ರಾತ್ರಿ 8.30ರ ಸುಮಾರಿಗೆ ನಾಗರಬಾವಿಯ 9ನೇ ಹಂತದಲ್ಲಿರುವ ಸುಧಾ ಏಜೆನ್ಸಿಯ ಗೋದಾಮಿಗೆ ನುಗ್ಗಿದ್ದರು. ಅಲ್ಲಿದ್ದ ಕೆಲಸಗಾರರನ್ನು ಹೆದರಿಸಿ, ಗಲ್ಲಾಪೆಟ್ಟಿಗೆಯಲ್ಲಿದ್ದ ₹6 ಲಕ್ಷ ನಗದು ಎತ್ತಿಕೊಂಡು ಪರಾರಿಯಾಗಿದ್ದರು. ಸುತ್ತಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಿದ್ದೇವೆ’ ಎಂದು ಪೊಲೀಸರು ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು