ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗನ ಕಾಟಕ್ಕೆ ಎಸ್‌ಒಪಿ: ಪಿಐಎಲ್‌ ವಿಲೇವಾರಿ

Last Updated 23 ಆಗಸ್ಟ್ 2022, 4:04 IST
ಅಕ್ಷರ ಗಾತ್ರ

ಬೆಂಗಳೂರು:‘ಮಂಗಗಳನ್ನು ಸೆರೆಹಿಡಿಯುವ ಮತ್ತು ಪುನರ್ವಸತಿ ಕಲ್ಪಿಸುವ ಕುರಿತಾದ ನಿರ್ದಿಷ್ಟ ಕಾರ್ಯಾಚರಣೆ ವಿಧಾನವನ್ನು (ಎಸ್‌ಒಪಿ) ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು‘ ಎಂದು ಹೈಕೋರ್ಟ್, ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶಿಸಿದೆ.

ಹಾಸನ ಜಿಲ್ಲೆಯ ಬೇಲೂರು ಬಳಿ ನಡೆದ ಮಂಗಗಳ ಮಾರಣ ಹೋಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

‘ಮಂಗಗಳ ಹಾವಳಿ ತಡೆಗೆ ಸಂಬಂಧಿಸಿದಂತೆ ಈಗಾಗಲೇ ಎಸ್‌ಒಪಿ ಜಾರಿಗೊಳಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ತಿಳಿಸಿದ್ದಾರೆ. ಹಾಗಾಗಿ, ಅರಣ್ಯ ಇಲಾಖೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ನಗರ ಸ್ಥಳೀಯ ಸಂಸ್ಥೆಗಳು ಈ ಕುರಿತ ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು’ ಎಂದು ನಿರ್ದೇಶಿಸಿದ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿದೆ.

ಪ್ರಕರಣವೇನು?: ಹಾಸನ ಜಿಲ್ಲೆಯ ಅರೇಹಳ್ಳಿ ಹೋಬಳಿಯ ಚೌಡೇನಹಳ್ಳಿಯಲ್ಲಿ2021ರ ಆಗಸ್ಟ್‌ನಲ್ಲಿ 38 ಮಂಗಗಳನ್ನು ಕೊಂದು ಅವುಗಳನ್ನು ಗೋಣಿ ಚೀಲದಲ್ಲಿ ತುಂಬಲಾಗಿತ್ತು. ಈ ಕುರಿತ ಮಾಧ್ಯಮಗಳನ್ನು ವರದಿ ಆಧರಿಸಿ ಹೈಕೋರ್ಟ್‌ ಸ್ವಯಂಪ್ರೇರಿತ ಪಿಐಎಲ್‌ ದಾಖಲಿಸಿಕೊಂಡಿತ್ತು. ಅಂತೆಯೇ, ಬೆಂಗಳೂರು ನಗರದಲ್ಲಿನ ಮಂಗಗಳ ಉಪಟಳದ ಬಗ್ಗೆ ವಕೀಲ ಬಿ.ಎಸ್.ರಾಧಾನಂದನ್‌ ಅವರೂ ಪಿಐಎಲ್ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT