ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಇಪಿಎಸ್-95 ಪಿಂಚಣಿದಾರರ ಮಾಸಿಕ ಸಭೆ

Published 5 ಜುಲೈ 2023, 7:12 IST
Last Updated 5 ಜುಲೈ 2023, 7:12 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಲಾಲ್‌ಬಾಗ್ ಆವರಣದಲ್ಲಿ ಇಪಿಎಸ್-95 ಪಿಂಚಣಿದಾರರ ಮಾಸಿಕ ಸಭೆ ನಡೆಯಿತು.

ಸಂಘದ ಅಧ್ಯಕ್ಷ ಶಂಕರ್ ಕುಮಾರ್ ಮಾತನಾಡಿ, ರಾಷ್ಟ್ರೀಯ ಸಂಘರ್ಷ ಸಮಿತಿ ಅಧ್ಯಕ್ಷರ ಹೋರಾಟಕ್ಕೆ ನಮ್ಮ ಸಂಘಟನೆ ಕೈಜೋಡಿಸಲಿದೆ. ಅವರ ಹೋರಾಟಕ್ಕೆ ಇನ್ನೂ ಹೆಚ್ಚಿನ ಬಲ ಬರಲಿದೆ. ಕನಿಷ್ಠ ಪಿಂಚಣಿ ₹ 7,500, ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯಕ್ಕೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ಸಾಧ್ಯವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

ಕಾರ್ಯಾಧ್ಯಕ್ಷ ನಂಜುಂಡೇಗೌಡ ಮಾತನಾಡಿ, ‘ಅಧಿಕಾರಿಗಳು ವರ್ತನೆ ಅಮಾನವೀಯ ಹಾಗೂ ಕಾರ್ಮಿಕ ವಿರೋಧಿ ನೀತಿಯಿಂದ ಕೂಡಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಅದರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿಗೆ ವ್ಯತಿರಿಕ್ತವಾಗಿ, ಎಲ್ಲ ಬೆಳವಣಿಗೆಗಳು ನಡೆಯುತ್ತಿವೆ. ಆರ್‌.ಸಿ. ಗುಪ್ತ ದಾಖಲಿಸಿರುವ ನ್ಯಾಯಾಲಯ ನಿಂದನಾ ಅರ್ಜಿ, ಪುನರ್ ಪರಿಶೀಲಿನಾ ಅರ್ಜಿಗಳು ವಿಚಾರಣೆಗೆ ಬಂದಾಗ ಅಧಿಕಾರಿಗಳ ನಿಜ ಬಣ್ಣ ತಿಳಿಯಲಿದೆ’ ಎಂದರು.

ಸಂಘದ ಉಪಾಧ್ಯಕ್ಷ ಆರ್ ಸುಬ್ಬಣ್ಣ, ಸಂಘದ ಪ್ರಧಾನ ಕಾರ್ಯದರ್ಶಿ ಡೋಲಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT