ಬೆಂಗಳೂರು: ‘ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಆರೋಪವು ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ.ಸಂದೇಶ್ ಮೇಲಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು’ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರನ್ನು ಸಂತ್ರಸ್ತೆ ಭೇಟಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವಿಚಾರಗಳ ಬಗ್ಗೆಯೂ ತಿಳಿಸಿದ್ದಾರೆ. ಹೀಗಾಗಿ, ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಅವರಿಗೆ ಸೂಚಿಸಿದ್ದೇನೆ’ ಎಂದರು.

‘ಇನ್ಸ್ಪೆಕ್ಟರ್ ವಿರುದ್ಧ ಆರೋಪ ಬಂದ ಬಳಿಕ ಅಮಾನತು ಮಾಡಿ, ವರದಿ ನೀಡುವಂತೆ ಸೂಚಿಸಲಾಗಿದೆ. ಇನ್ನೂ ಅನೇಕ ಆರೋಪಗಳು ಕೇಳಿ ಬಂದಿದ್ದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ತನಿಖೆ ಬಳಿಕ ಸತ್ಯಾಂಶ ಹೊರಬರುತ್ತದೆ. ಇನ್ನೂ ಎಷ್ಟು ಜನ ಸಂತ್ರಸ್ತರಿದ್ದಾರೆ ಎಂಬುದು ತನಿಖೆ ವೇಳೆ ಗೊತ್ತಾಗಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.