ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಸಾರಿಗೆ ನೌಕರರ ಮುಷ್ಕರ‌: ಮೆಟ್ರೊ ರೈಲುಗಳ ಸಂಚಾರ ಸಂಖ್ಯೆ ಹೆಚ್ಚಳ

Last Updated 7 ಏಪ್ರಿಲ್ 2021, 3:54 IST
ಅಕ್ಷರ ಗಾತ್ರ

ಬೆಂಗಳೂರು: ಸಾರಿಗೆ ಸಂಸ್ಥೆ ನೌಕರರ ಮುಷ್ಕರದಿಂದ ಬಸ್‌ ಸಂಚಾರ ವ್ಯತ್ಯಯವಾಗುವ ನಿಟ್ಟಿನಲ್ಲಿ, ಬೆಂಗಳೂರು ಮೆಟ್ರೊ ರೈಲು ನಿಗಮವು ಬುಧವಾರ ಹೆಚ್ಚು ರೈಲುಗಳ ಸೇವೆ ಒದಗಿಸಲು ಮುಂದಾಗಿದೆ. ಅಂದರೆ, ರೈಲುಗಳ ನಡುವಿನ ಸಂಚಾರ ಸಮಯವನ್ನು ಅಥವಾ ಕಾಯುವ ಸಮಯವನ್ನು ತಗ್ಗಿಸಲಾಗಿದೆ.

ಏ.7ರಂದು ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ನೇರಳೆ ಮಾರ್ಗದಲ್ಲಿ 4.5 ನಿಮಿಷಕ್ಕೆ ಒಂದು, ಹಸಿರು ಮಾರ್ಗದಲ್ಲಿ 5 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.

ಸಾಮಾನ್ಯ ದಿನಗಳಲ್ಲಿ ದಟ್ಟಣೆಯ ಅಲ್ಲದ ಸಂದರ್ಭದಲ್ಲಿ ನೇರಳ ಮಾರ್ಗದಲ್ಲಿ 10 ನಿಮಿಷಕ್ಕೊಂದು, ಹಸಿರು ಮಾರ್ಗದಲ್ಲಿ 12 ನಿಮಿಷಕ್ಕೊಂದು ರೈಲು ಸಂಚರಿಸುತ್ತಿತ್ತು.

ಸಾರ್ವಜನಿಕರು ಮೆಟ್ರೊ ಸ್ಮಾರ್ಟ್‌ ಕಾರ್ಡ್‌ ಬಳಸಿ ಪ್ರಯಾಣಿಸಬಹುದು. ಹೊಸ ಕಾರ್ಡ್‌ಗಳನ್ನು ಡೆಬಿಟ್‌ (ಎಟಿಎಂ) ಅಥವಾ ಕ್ರೆಡಿಟ್‌ ಕಾರ್ಡ್ ಅಥವಾ ಯುಪಿಐ ಮೂಲಕ ಹಣ ಪಾವತಿಸಿ ನಿಲ್ದಾಣಗಳಲ್ಲಿ ಖರೀದಿಸಬಹುದು ಎಂದು ನಿಗಮ ಪ್ರಕಟಣೆಯಲ್ಲಿ ಹೇಳಿದೆ.

ಬೆಂಗಳೂರಿನಲ್ಲೇ ಮೂರು ಸಾವಿರಕ್ಕೂ ಹೆಚ್ಚು ಖಾಸಗಿ ಬಸ್‌ಗಳನ್ನು ಓಡಿಸಲು ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಬೇರೆ ಜಿಲ್ಲೆಗಳಲ್ಲೂ ಖಾಸಗಿ ಬಸ್, ಮ್ಯಾಕ್ಸಿಕ್ಯಾಬ್‌ಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲು ಸಾರಿಗೆ ಇಲಾಖೆ ಅನುಮತಿ ನೀಡಿದೆ. ಮುಷ್ಕರ ಇದೆ ಎಂಬ ಕಾರಣಕ್ಕೆ ಪ್ರಯಾಣ ದರ ಹೆಚ್ಚಳ ಮಾಡಬಾರದು ಎಂಬ ಎಚ್ಚರಿಕೆಯನ್ನೂ ನೀಡಿದೆ. ಖಾಸಗಿ ಬಸ್‌ಗಳು ಸರ್ಕಾರಿ ಬಸ್‌ ನಿಲ್ದಾಣಗಳಿಗೆ ಬಂದು ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಅವಕಾಶವನ್ನೂ ನೀಡಲಾಗಿದೆ. ಮುಷ್ಕರಕ್ಕೆ ಹೆದರದೆ ಕರ್ತವ್ಯಕ್ಕೆ ಬರುವ ಸಿಬ್ಬಂದಿಗೆ ಎಲ್ಲಾ ರೀತಿಯ ಭದ್ರತೆ ಒದಗಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದ್ದಾರೆ. ಹೆಚ್ಚುವರಿಯಾಗಿ ರೈಲುಗಳ ಸೇವೆ ಮತ್ತು ಬೆಂಗಳೂರಿನಲ್ಲಿ ಮೆಟ್ರೊ ರೈಲು ಸೇವೆಯನ್ನೂ ಹೆಚ್ಚಿಸಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ.

ಇನ್ನಷ್ಟು ಓದು–

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT