ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಕ್ಯಾಮೆರಾ ಪುರಾವೆ: ಒಂದೇ ಠಾಣೆಯಲ್ಲಿ 1.02 ಲಕ್ಷ ಪ್ರಕರಣ

Published 27 ಮೇ 2024, 15:43 IST
Last Updated 27 ಮೇ 2024, 15:43 IST
ಅಕ್ಷರ ಗಾತ್ರ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವವರ ಪತ್ತೆಗಾಗಿ ನಗರದ ಹಲವೆಡೆ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಇವುಗಳು ಕ್ಲಿಕ್ಕಿಸುವ ಫೋಟೊಗಳನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಾರೆ.

ಸದಾಶಿವನಗರದ ಸಂಚಾರ ಠಾಣೆ ವ್ಯಾಪ್ತಿಯ ಹಲವೆಡೆ ಎಫ್‌ಟಿವಿಆರ್ (ಸಂಚಾರ ನಿಯಮ ಉಲ್ಲಂಘನೆ ವರದಿ) ತಂತ್ರಜ್ಞಾನ ಆಧರಿತ ಕ್ಯಾಮೆರಾಗಳನ್ನು ಅಳಡಿಸಲಾಗಿದೆ. ಇದು ಒಂದೇ ಠಾಣೆ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗ ಸಂಬಂಧಪಟ್ಟಂತೆ 2024ರ ಜನವರಿಯಿಂದ ಮೇ 27ರವರೆಗೆ 1.02 ಲಕ್ಷ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.

‘ನಗರದಲ್ಲಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇವುಗಳ ಜೊತೆಗೆ ಸಂಚಾರ ನಿಯಮಗಳ ಉಲ್ಲಂಘನೆ ಪ್ರಮಾಣವೂ ವೃದ್ಧಿಸುತ್ತಿದೆ. ಸಂಚಾರ ನಿಯಮ ಉಲ್ಲಂಘನೆಯಿಂದಾಗಿ ಅಪಘಾತಗಳು ಸಂಭವಿಸುತ್ತಿವೆ. ಹೆಲ್ಮೆಟ್‌ ಧರಿಸದೇ ಸವಾರಿ, ಅತೀ ವೇಗದಲ್ಲಿ ಚಾಲನೆ, ಹೀಗೆ ಹಲವು ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ಸಂಖ್ಯೆ ಹೆಚ್ಚಾಗುತ್ತಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ನಗರದಲ್ಲಿ ಸಿಬ್ಬಂದಿ ಕೊರತೆ ಇದೆ. ಪ್ರತಿಯೊಂದು ವಾಹನಗಳ ಮೇಲೆ ಕಣ್ಣಿಡಲು ಸಾಧ್ಯವಾಗುವುದಿಲ್ಲ. ಇದೇ ಕಾರಣಕ್ಕೆ ನಗರದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸುವ ಸಾರ್ವಜನಿಕರ ಫೋಟೊ ಕ್ಯಾಮೆರಾದಲ್ಲಿ ಸೆರೆಯಾಗುತ್ತದೆ. ವಾಹನಗಳ ನೋಂದಣಿ ಸಂಖ್ಯೆ ಹಾಗೂ ಗುರುತು ಸಹ ಪತ್ತೆ ಹಚ್ಚುವುದು ಸುಲಭ. ಇದೇ ನೋಂದಣಿ ಸಂಖ್ಯೆ ಆಧರಿಸಿ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ. ದಂಡ ಬಾಕಿ ಇರುವ ಜನರ ಮೊಬೈಲ್‌ ಹಾಗೂ ಮನೆಗಳಿಗೆ ನೋಟಿಸ್ ನೀಡಲಾಗುತ್ತಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT