ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಚಾರ ನಿಯಮ ಉಲ್ಲಂಘನೆ: 80ಕ್ಕೂ ಹೆಚ್ಚು ಬಿಲ್‌ ಬೋರ್ಡ್ ತೆರವು

Published 6 ಮಾರ್ಚ್ 2024, 14:12 IST
Last Updated 6 ಮಾರ್ಚ್ 2024, 14:12 IST
ಅಕ್ಷರ ಗಾತ್ರ

ಬೆಂಗಳೂರು: ಸಂಚಾರ ಪೂರ್ವ ವಿಭಾಗದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಪಾದಚಾರಿ ಮಾರ್ಗದಲ್ಲಿ ಇಡಲಾಗಿದ್ದ ಸುಮಾರು 80ಕ್ಕಿಂತಲೂ ಹೆಚ್ಚಿನ ಬಿಲ್‌ಬೋರ್ಡ್‌ಗಳನ್ನು ಜಪ್ತಿ ಮಾಡಿಕೊಂಡು, ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿದ ಅಂಗಡಿಗಳ ಮಾಲೀಕರ ವಿರುದ್ಧ ಕಲಂ 283 ಐಪಿಸಿ ಅಡಿಯಲ್ಲಿ 3 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಕೆ.ಪಿ. ಆ್ಯಕ್ಟ್‌ ಅಡಿಯಲ್ಲಿ ಒಟ್ಟು 51 ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಟಿ.ಸಿ. ಪಾಳ್ಯ, ಮುಖ್ಯರಸ್ತೆ, ಮಾರತ್ತಹಳ್ಳಿ ಹೊರವರ್ತುಲ ರಸ್ತೆ, ಐಟಿಪಿಎಲ್‌ ಮುಖ್ಯರಸ್ತೆ, ವರ್ತೂರು ಸಿದ್ದಾಪುರ ಮುಖ್ಯರಸ್ತೆ, ವೈಟ್‌ಫೀಲ್ಡ್‌, ಇಮ್ಮಡಿಹಳ್ಳಿ, ಚನ್ನಸಂದ್ರ, ಕೆಪಿಟಿಒ, ಹಗದೂರು, ವೈದೇಹಿ ಮುಖ್ಯರಸ್ತೆಗಳ ಪಾದಚಾರಿ ಮಾರ್ಗದಲ್ಲಿ ಅನಧಿಕೃತವಾಗಿ ಅಂಗಡಿ ಮುಂಗಟ್ಟುಗಳನ್ನು ಇಟ್ಟುಕೊಂಡು ಪಾದಚಾರಿಗಳಿಗೆ ತೊಂದರೆ ನೀಡಲಾಗುತ್ತಿತ್ತು. ವಿಶೇಷ ಕಾರ್ಯಾಚರಣೆ ನಡೆಸಿ ಬಿಲ್‌ಬೋರ್ಡ್‌ ಹಾಗೂ ಅಂಗಡಿ ಮುಂಗಟ್ಟುಗಳನ್ನು ತೆರವು ಮಾಡಲಾಯಿತು ಎಂದು ಸಂಚಾರ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT