ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 4.33 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ

Last Updated 16 ಮಾರ್ಚ್ 2023, 4:50 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ವಿಭಾಗದ ಆರು ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 23 ಪ್ರಕರಣಗಳನ್ನು ಪತ್ತೆ ಮಾಡಲಾಗಿದ್ದು, 11 ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳಿಂದ ₹ 4.33 ಕೋಟಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್‌ ಪ್ರತಾಪ್‌ ರೆಡ್ಡಿ ತಿಳಿಸಿದರು.

ಅಶೋಕನಗರದಲ್ಲಿ ಒಟ್ಟು 8 ಪ್ರಕರಣಗಳಲ್ಲಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. 223 ಗ್ರಾಂ ಚಿನ್ನ, ಬೆಳ್ಳಿ, ಹವಳ ಹಾಗೂ ನಗದು ವಶಕ್ಕೆ ಪಡೆಯಲಾಗಿದೆ. ವಿವೇಕನಗರದಲ್ಲಿ ಇಬ್ಬರನ್ನು ಬಂಧಿಸಿ, 300 ಗ್ರಾಂ ಚಿನ್ನ, ಎಸ್‌.ಆರ್‌.ನಗರದಲ್ಲಿ ಪ್ರಕರಣವೊಂದರಲ್ಲಿ 50 ಗ್ರಾಂ ಚಿನ್ನ, ಹಲಸೂರು ಗೇಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 8 ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 1 ಕೆ.ಜಿ 522 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಎಸ್‌.ಜೆ. ಪಾರ್ಕ್‌ನಲ್ಲಿ 1 ಪ್ರಕರಣ, ವಿಲ್ಸನ್‌ ಗಾರ್ಡ್‌ನಲ್ಲಿ 1 ಪ್ರಕರಣ ಹಾಗೂ ಶೇಷಾದ್ರಿಪುರಂನ 3 ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT