ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗಕ್ಕಾಗಿ ₹ 10 ನೋಂದಣಿ; ₹ 1.44 ಲಕ್ಷ ಕಳೆದುಕೊಂಡ ಬೆಂಗಳೂರು ನಿವಾಸಿ​!

Last Updated 18 ಜೂನ್ 2021, 1:23 IST
ಅಕ್ಷರ ಗಾತ್ರ

ಬೆಂಗಳೂರು: ಉದ್ಯೋಗಕ್ಕಾಗಿ ₹ 10 ನೀಡಿ ನೋಂದಣಿ ಮಾಡಿಕೊಂಡಿದ್ದ ನಗರದ ನಿವಾಸಿಯೊಬ್ಬರು ₹ 1.44 ಲಕ್ಷ ಕಳೆದುಕೊಂಡಿದ್ದಾರೆ.

‘ಆರ್.ಎಂ. ನಗರದ 25 ವರ್ಷದ ಯುವಕರೊಬ್ಬರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ನಯನಾ ಶರ್ಮಾ ಎಂಬುವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ದೂರುದಾರ ಉದ್ಯೋಗಕ್ಕಾಗಿ ಹುಡುಕಾಟ ನಡೆಸಿದ್ದರು. ಹಲವು ಜಾಲತಾಣಗಳಲ್ಲಿ ವೈಯಕ್ತಿಕ ವಿವರ ಅಪ್‌ಲೋಡ್ ಮಾಡಿದ್ದರು. ನೌಕರಿ ಇಂಟ್ರೊ ಡಾಟ್ ಇನ್ ಜಾಲತಾಣದ ಪ್ರತಿನಿಧಿ ಸೋಗಿನಲ್ಲಿ ಯುವಕನಿಗೆ ಕರೆ ಮಾಡಿದ್ದ ಆರೋಪಿ, ‘₹ 10 ನೀಡಿ ನಮ್ಮ ಜಾಲತಾಣದಲ್ಲಿ ನೋಂದಣಿ ಮಾಡಿಕೊಳ್ಳಿ. ನಿಮಗೆ ಉದ್ಯೋಗದ ಮಾಹಿತಿ ನೀಡಲಾಗುವುದು’ ಎಂದಿದ್ದಳು.’

‘ಆರೋಪಿ ಮಾತು ನಂಬಿದ್ದ ದೂರುದಾರ, ಕ್ರೆಡಿಟ್ ಕಾರ್ಡ್‌ ಬಳಸಿ ನೋಂದಣಿ ಮಾಡಿಕೊಂಡಿದ್ದರು. ಅದಾದ ಕೆಲ ನಿಮಿಷಗಳಲ್ಲೇ ಆರೋಪಿ ಬ್ಯಾಂಕ್ ಖಾತೆಯಿಂದ ₹1.44 ಲಕ್ಷ ಕಡಿತವಾಗಿದೆ. ಆರೋಪಿ ಮೊಬೈಲ್ ಸಹ ಸ್ವಿಚ್ ಆಫ್ ಆಗಿದೆ’ ಎಂದೂ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT