ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳವು ಪ್ರಕರಣ: ₹7  ಲಕ್ಷ ಮೌಲ್ಯದ ವಾಹನಗಳು ಜಪ್ತಿ– ಆರೋಪಿ ಬಂಧನ‌

Published 21 ಜೂನ್ 2023, 21:21 IST
Last Updated 21 ಜೂನ್ 2023, 21:21 IST
ಅಕ್ಷರ ಗಾತ್ರ

ಬೆಂಗಳೂರು: ಕಲಾಸಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಾಹನ ಕಳವು ಪ್ರಕರಣದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ₹7 ಲಕ್ಷ ಮೌಲ್ಯದ ವಾಹನಗಳನ್ನು ಜಪ್ತಿ ಪಡಿಸಿಕೊಂಡಿದ್ದಾರೆ.

ಈತನಿಂದ ಆಟೊ ರಿಕ್ಷಾ ಹಾಗೂ 9 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

ಇದೇ ಆರೋಪಿ ವಿರುದ್ಧ ಕಲಾಸಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಎರಡು, ಮಹದೇವಪುರ, ತಿಲಕನಗರ, ನೆಲಮಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ರಸ್ತೆಯ ಬದಿಯಲ್ಲಿ ನಿಲುಗಡೆ ಮಾಡಿದ್ದ ಬೈಕ್‌ ಹಾಗೂ ಆಟೊಗಳನ್ನು ನಕಲಿ ಕೀ ಬಳಸಿ ಕಳವು ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT