ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 7000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ

ಶಿಕ್ಷಕರ ನೇಮಕಕ್ಕೆ ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಆಗ್ರಹ
Last Updated 16 ಜುಲೈ 2022, 4:36 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಏಳು ವರ್ಷಗಳಿಂದ ಸರ್ಕಾರ ಅನುಮತಿ ನೀಡಿಲ್ಲ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಆರೋಪಿಸಿದೆ.

ರಾಜ್ಯದಲ್ಲಿ 3,740 ಅನುದಾನಿತ ಪ್ರೌಢಶಾಲೆಗಳು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಬಹುತೇಕ ಎಲ್ಲವೂ ಕನ್ನಡ ಮಾಧ್ಯಮ ಶಾಲೆಗಳಾಗಿವೆ. 10 ಲಕ್ಷಕ್ಕೂ ಹೆಚ್ಚು ಮಕ್ಕಳು ಉಚಿತ ಶಿಕ್ಷಣ ಪಡೆಯುತ್ತಿದ್ದಾರೆ. ರಾಜ್ಯ ಸರ್ಕಾರ 2016ರಿಂದ ಇದುವರೆಗೂ ಶಿಕ್ಷಕರ ನೇಮಕಕ್ಕೆ ಆದೇಶ ನೀಡದೇ ಇರುವುದರಿಂದ 7,045 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಒಕ್ಕೂಟದ ಅಧ್ಯಕ್ಷ ವೈ.ಎಚ್. ಹುಚ್ಚಯ್ಯ ಮಾಹಿತಿ ನೀಡಿದರು.

‘ಗ್ರಾಮೀಣ ಭಾಗದಲ್ಲಿರುವ ಅನುದಾನಿತ ಪ್ರೌಢಶಾಲೆಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಶಾಲೆಗಳಲ್ಲಿ ಗಣಿತ, ವಿಜ್ಞಾನ, ಇಂಗ್ಲಿಷ್ ಭಾಷೆಯ ಶಿಕ್ಷಕರಿಲ್ಲದೇ ಗುಣಾತ್ಮಕ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಶಾಲೆಗಳು ಮುಚ್ಚುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಶಿಕ್ಷಕರ ನೇಮಿಸಿಕೊಳ್ಳಲು ಅನುಮತಿ ನೀಡಬೇಕು ಎಂದು ಮುಖ್ಯಮಂತ್ರಿ ಸೇರಿದಂತೆ ಶಿಕ್ಷಣ ಸಚಿವ ಮತ್ತು ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಬೇರೆ ಮಾರ್ಗವಿಲ್ಲದೇ ನ್ಯಾಯಲಯದ ಮೋರೆ ಹೋಗಿದ್ದೇವೆ’ ಎಂದು ತಿಳಿಸಿದರು.

‘ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಖಾಸಗಿ ಶಿಕ್ಷಣ ಸಂಸ್ಥೆಗಳು ಹಣ ಗಳಿಸುವ ಉದ್ದೇಶದಿಂದ ಕೆಲಸ ಮಾಡುತ್ತಿವೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಶಿಕ್ಷಣ ಇಲಾಖೆಯು ಅನುದಾನಿತ ಶಿಕ್ಷಣ ಸಂಸ್ಥೆಗಳ ಶೋಷಣೆ ಮಾಡುತ್ತಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT