ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲೀಕರಿಲ್ಲದ 1,412 ವಾಹನಗಳ ಪತ್ತೆ

Published 17 ಏಪ್ರಿಲ್ 2024, 16:34 IST
Last Updated 17 ಏಪ್ರಿಲ್ 2024, 16:34 IST
ಅಕ್ಷರ ಗಾತ್ರ

ಬೆಂಗಳೂರು: ನಗರದ 50 ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ರಸ್ತೆಗಳ ಬದಿಯಲ್ಲಿ ಹಲವು ತಿಂಗಳಿಂದ ನಿಲುಗಡೆ ಮಾಡಿದ್ದ ಮಾಲೀಕರಿಲ್ಲದ 1,412 ವಾಹನಗಳನ್ನು ಪತ್ತೆ ಮಾಡಿದ್ದಾರೆ.

ರಸ್ತೆಬದಿ, ಪಾದಚಾರಿ ಮಾರ್ಗದಲ್ಲಿ ತಿಂಗಳುಗಟ್ಟಲೆ ವಾಹನಗಳನ್ನು ನಿಲುಗಡೆ ಮಾಡಿದ್ದರಿಂದ ಪಾದಚಾರಿಗಳಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದೆ ಎಂಬ ದೂರುಗಳು ಬಂದಿದ್ದವು. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು.

ಈ ರೀತಿಯ ವಾಹನಗಳನ್ನು ಪತ್ತೆ ಹಚ್ಚಲು ಠಾಣಾಮಟ್ಟದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ನಗರದಲ್ಲಿ 1,412 ವಾಹನಗಳಿವೆ ಎಂಬುದನ್ನು ಪತ್ತೆ ಹಚ್ಚಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಗುರುತಿಸಿರುವ 1,412 ವಾಹನಗಳ ಪೈಕಿ, 521 ಬೈಕ್‌, 706 ಆಟೊ, 79 ಕಾರು, 6 ಭಾರಿ ವಾಹನಗಳು, 93 ಲಘು ಸರಕು ಸಾಗಾಣಿಕೆ ವಾಹನಗಳು ಹಾಗೂ ಇತರೆ 7 ವಾಹನಗಳಿವೆ. ಅದರಲ್ಲಿ 449 ಬೈಕ್‌ಗಳು, 350 ಆಟೊ, 48 ಕಾರು, 2 ಭಾರಿ ವಾಹನ, 68 ಲಘು ಸರಕು ಸಾಗಾಣಿಕೆ ವಾಹನಗಳು ಹಾಗೂ 1 ಇತರೆ ವಾಹನ ಸೇರಿ 918 ವಾಹನಗಳನ್ನು ವಿಲೇವಾರಿ ಮಾಡಲಾಗಿದೆ. 494 ವಾಹನಗಳ ವಿಲೇವಾರಿ ಬಾಕಿ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಾಹನದ ಮಾಲೀಕರನ್ನು ಪತ್ತೆಹಚ್ಚಿ, ಅವರಿಂದ ಸಂಚಾರ ನಿಯಮ ಉಲ್ಲಂಘನೆ ಆರೋಪದಡಿ ದಂಡ ಪಾವತಿಸಿಕೊಂಡು ಸ್ಥಳದಿಂದ ತೆರವುಗೊಳಿಸಲಾಗಿದೆ. ಇತರೆ ವಾಹನಗಳ ವಾರಸುದಾರರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಮಾಲೀಕರು ಪತ್ತೆ ಆಗದಿದ್ದ ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗುವುದು. ಕೋರ್ಟ್ ಅನುಮತಿ ಪಡೆದು ಹರಾಜು ಹಾಕುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT