ಬೆಂಗಳೂರು: ನಗರದ 9 ಕಡೆಗಳಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ₹ 2.48 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

‘ಹೆಣ್ಣೂರು, ಕೊಡಿಗೇಹಳ್ಳಿ, ಎಚ್‌ಎಸ್‌ಆರ್ ಲೇಔಟ್, ಪುಟ್ಟೇನಹಳ್ಳಿ, ತಲಘಟ್ಟಪುರ, ಕೋರಮಂಗಲ, ಬೊಮ್ಮನಹಳ್ಳಿ, ಕೆ.ಆರ್.ಪುರ ಹಾಗೂ ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ವಿದೇಶಿ ಪ್ರಜೆಗಳು ಸೇರಿ 13 ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಡ್ರಗ್ಸ್ ಸಾಗಣೆ ಹಾಗೂ ಮಾರಾಟದ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗುತ್ತಿರುವವರ ಬಗ್ಗೆ ನಿಗಾ ಇರಿಸಲಾಗಿದೆ’ ಎಂದು ಹೇಳಿದರು.

ಕಾರಿನ ಸೀಟಿನಲ್ಲಿ ಡ್ರಗ್ಸ್: ‘ಎಚ್‌ಎಸ್‌ಆರ್ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಸಿಕ್ಕಿಬಿದ್ದಿರುವ ಆರೋಪಿ ಲೋಕೇಶ್, ತನ್ನ ಕಾರಿನ ಸೀಟಿನೊಳಗೆ ಡ್ರಗ್ಸ್ ಬಚ್ಚಿಡುತ್ತಿದ್ದ. ಅದೇ ಕಾರಿನಲ್ಲಿ ಸುತ್ತಾಡಿ, ಕೆಲ ಐಟಿ– ಬಿಟಿ ಕಂಪನಿ ಉದ್ಯೋಗಿಗಳು ಹಾಗೂ ಕೆಲ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ’ ಎಂದು ಕಮಿಷನರ್ ತಿಳಿಸಿದರು.

‘ನೈಜೀರಿಯಾ, ಸುಡಾನ್ ದೇಶದ ಪ್ರಜೆಗಳೂ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ. ನಿರ್ಜನ ಪ್ರದೇಶ ಹಾಗೂ ಮರಗಳ ಬುಡದಲ್ಲಿ ಡ್ರಗ್ಸ್ ಬಚ್ಚಿಡುತ್ತಿದ್ದ ಆರೋಪಿಗಳು, ಗ್ರಾಹಕರಿಗೆ ಡ್ರಗ್ಸ್ ಪೊಟ್ಟಣದ ಫೋಟೊ ಹಾಗೂ ಲೋಕೇಶನ್ ಕಳುಹಿಸುತ್ತಿದ್ದರು. ಗ್ರಾಹಕರು ಸ್ಥಳಕ್ಕೆ ಬಂದು ಡ್ರಗ್ಸ್ ಪೊಟ್ಟಣ ತೆಗೆದುಕೊಂಡು ಹೋಗುತ್ತಿದ್ದರು. ಆನ್‌ಲೈನ್ ಮೂಲಕ ಹಣ ಪಾವತಿ ಮಾಡುತ್ತಿದ್ದರು’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.