ಬುಧವಾರ, ಅಕ್ಟೋಬರ್ 21, 2020
26 °C

ತಾಯಿ– ಮಗ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸುಮಿತ್ರಮ್ಮ (55) ಹಾಗೂ ಅವರ ಮಗ ಶಿವರಾಜ್ (25) ಎಂಬುವರು ನೇಣು ಹಾಕಿಕೊಂಡು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಬ್ಯಾಟರಾಯನಪುರ ನಿವಾಸಿ ಸುಮಿತ್ರಮ್ಮ ಹಾಗೂ ಶಿವರಾಜ್ ಸಾವಿನ ಬಗ್ಗೆ ಸಂಬಂಧಿಕರ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಹಲವರ ಬಳಿ ಸಾಲ ಪಡೆದಿದ್ದ ತಾಯಿ–ಮಗ, ಅದನ್ನು ವಾಪಸು ಕೊಡಲು ಸಾಧ್ಯವಾಗಿರಲಿಲ್ಲ. ಸಾಲ ಕೊಟ್ಟವರು ಮನೆ ಬಳಿ ಬಂದು ಹಣ ವಾಪಸು ನೀಡುವಂತೆ ಒತ್ತಾಯಿಸುತ್ತಿದ್ದರು. ಬೇಸತ್ತ ತಾಯಿ–ಮಗ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನವಿದೆ. ಮರಣ ಪತ್ರವೂ ಸಿಕ್ಕಿಲ್ಲ’ ಎಂದರು.

‘ಸುಮಿತ್ರಮ್ಮ ಅವರಿಗೆ ಮಂಗಳವಾರ ಸಂಜೆ ಪುತ್ರಿ ಕರೆ ಮಾಡಿದ್ದರು. ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಗಾಬರಿ
ಗೊಂಡ ಪುತ್ರಿ, ಮನೆಗೆ ಬಂದು ನೋಡಿದಾಗ ಒಳಗಿನಿಂದಲೇ ಬಾಗಿಲು ಬಂದ್ ಮಾಡಲಾಗಿತ್ತು. ಸ್ಥಳೀಯರ ನೆರವಿನಿಂದ ಬಾಗಿಲು ಮುರಿದು ಒಳ ಪ್ರವೇಶಿಸಿದಾಗ ಮೃತದೇಹಗಳು ಕಂಡಿದ್ದವು’ ಎಂದೂ ಪೊಲೀಸರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು