ಶನಿವಾರ, ಮೇ 28, 2022
21 °C

ಬೆಂಗಳೂರು: ಗ್ಯಾಸ್ ಗೀಸರ್‌ ಅನಿಲ ಸೋರಿಕೆ: ತಾಯಿ–ಮಗಳ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿಕ್ಕಬಾಣಾವರದ ಮನೆಯೊಂದರ ಸ್ನಾನದ ಕೊಠಡಿಯಲ್ಲಿ ಗ್ಯಾಸ್ ಗೀಸರ್‌ನಿಂದ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ ತಾಯಿ, ಮಗಳು ಮೃತಪಟ್ಟಿದ್ದಾರೆ.

ಸ್ಥಳೀಯ ನಿವಾಸಿ ಮಂಗಳಾ(35) ಹಾಗೂ ಅವರ ಮಗು ಗೌತಮಿ (7) ಮೃತರು. ಘಟನೆ ಬಗ್ಗೆ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ರಾಮನಗರದ ಮಂಗಳಾ, ಪತಿ ನರಸಿಂಹಮೂರ್ತಿ ಜೊತೆ ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಚಿಕ್ಕಬಾಣಾವರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ನರಸಿಂಹಮೂರ್ತಿ ಅವರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಗೌತಮಿಗೆ ಸ್ನಾನ ಮಾಡಿಸಲು ಮಂಗಳಾ ಹೋಗಿದ್ದರು. ಗ್ಯಾಸ್ ಗೀಸರ್ ಆನ್ ಮಾಡಿ ಬೀಸಿನೀರಿನಿಂದ ಸ್ನಾನ ಮಾಡಿಸುತ್ತಿದ್ದರು. ಇದೇ ಸಂದರ್ಭದಲ್ಲೇ ಗೀಸರ್‌ನಿಂದ ಕಾರ್ಬನ್‌ ಮೋನಾಕ್ಸೈಡ್ ಸೋರಿಕೆಯಾಗಿ, ಇಡೀ ಕೊಠಡಿ ಆವರಿಸಿತ್ತು. ಉಸಿರಾಡಲು ಸಾಧ್ಯವಾಗದೇ ತಾಯಿ–ಮಗಳು ಪ್ರಜ್ಞೆ ತಪ್ಪಿ ಬಿದ್ದಿದ್ದರು.’

‘ಆಗಾಗ ಮನೆಯಿಂದ ಹೊರಗೆ ಬರುತ್ತಿದ್ದ ಮಂಗಳಾ, ಸಂಜೆಯಾದರೂ ಮನೆಯಿಂದ ಹೊರಗೆ ಬಂದಿರಲಿಲ್ಲ. ಏನಾಯಿತೆಂದು ಕೇಳಲು ಮಾಲೀಕರು ಮನೆಯೊಳಗೆ ಹೋಗಿದ್ದಾಗಲೇ ವಿಷಯ ಗೊತ್ತಾಗಿದೆ. ತಾಯಿ–ಮಗಳ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು