ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಗಳನ್ನು ಕೊಂದ ತಾಯಿ

Published 13 ಜೂನ್ 2024, 16:40 IST
Last Updated 13 ಜೂನ್ 2024, 16:40 IST
ಅಕ್ಷರ ಗಾತ್ರ

ಬೆಂಗಳೂರು: ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ಮಂಜುನಾಥನಗರದಲ್ಲಿ ಗುರುವಾರ ಮಗುವನ್ನು ತಾಯಿಯೇ ಕತ್ತು ಹಿಸುಕಿ ಕೊಲೆ ಮಾಡಿದ್ದು, ಮಗುವಿನ ಆರೋಗ್ಯದ ಸಮಸ್ಯೆಯಿಂದ ಬೇಸತ್ತು ಈ ಕೃತ್ಯ ಎಸಗಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.

ಪ್ರಿತಿಕಾ (3) ಎಂಬ ಮಗು ಮೃತಪಟ್ಟಿದ್ದು, ತಾಯಿ ರಮ್ಯಾ (31) ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

'ಆರೋಪಿ ರಮ್ಯಾ ಅವರ ಪತಿ ವಿದೇಶದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ವಾಸವಾಗಿದ್ದಾರೆ. ರಮ್ಯಾ ಮಗಳೊಂದಿಗೆ ಮಂಜುನಾಥನಗರದ ಮನೆಯಲ್ಲಿ ವಾಸವಾಗಿದ್ದರು. ಗುರುವಾರ ಮಧ್ಯಾಹ್ನ 12.30ಕ್ಕೆ ಪ್ರಿತಿಕಾಳನ್ನು ದುಪ್ಪಟ್ಟ ಬಳಸಿ, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಮಗು ಮೃತಪಟ್ಟ ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗು ಮನೆಯಲ್ಲಿಯೇ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದರು’ ಎಂದು ಪೊಲೀಸರು ಹೇಳಿದರು.

‘ರಮ್ಯಾ ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಇತ್ತೀಚೆಗೆ ಕೆಲಸ ಬಿಟ್ಟಿದ್ದರು. ಮಗಳಿಗೆ ಆರೋಗ್ಯ ಸಮಸ್ಯೆ ಇದ್ದ ಕಾರಣ, ಮಗುವಿನ ಬೆಳವಣಿಗೆಯಾದಂತೆಲ್ಲ ಸಮಸ್ಯೆ ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ಸಾಯಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT