ಬೆಂಗಳೂರು: ವಸ್ತ್ರ ಸಂಹಿತೆ ಜಾರಿ ಹಾಗೂ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ರದ್ದುಗೊಳಿಸಿರುವ ಕ್ರಮವನ್ನು ಖಂಡಿಸಿ ನಗರದ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಅಭಿಯಾನ ಆರಂಭಿಸಿದ್ದಾರೆ.

ಶಿಸ್ತು ಪಾಲನೆಯ ಹೆಸರಿನಲ್ಲಿ ಕಾಲೇಜು ಆಡಳಿತ ಮಂಡಳಿಯವರು ಪದವಿ ಹಾಗೂ ಸ್ನಾತಕೋತ್ತರ ಪದವೀಧರರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದಿದ್ದಾರೆ.

‘ಶೈಕ್ಷಣಿಕ ವರ್ಷ ಆರಂಭದ ದಿನವೇ ಆಡಳಿತ ಮಂಡಳಿಯವರು ವಿದ್ಯಾರ್ಥಿ ವಿರೋಧಿ ನೀತಿ ಜಾರಿ ಮಾಡಿದ್ದಾರೆ’ ಎಂದು ವಿದ್ಯಾರ್ಥಿಯೊಬ್ಬ ಬರೆದುಕೊಂಡಿದ್ದಾನೆ.

ಇನ್ನೊಬ್ಬ ವಿದ್ಯಾರ್ಥಿ, ‘ನಾವು ಉನ್ನತ ಶಿಕ್ಷಣ ಪಡೆಯುತ್ತಿದ್ದರೂ, ಶಾಲಾ ಮಕ್ಕಳಂತೆ ನಡೆಸಿಕೊಳ್ಳುತ್ತಿದ್ದಾರೆ’ ಎಂದು ಪೋಸ್ಟ್ ಮಾಡಿದ್ದಾನೆ. ಗೇಟ್ ಪ್ರವೇಶಿಸುವ ಸಂದರ್ಭದಲ್ಲಿ ಪರಿಶೀಲನಾ ಕ್ರಮವು ಕಿರಿಕಿರಿ ಉಂಟು ಮಾಡುತ್ತಿದೆ ಎಂದು ಕೆಲವರು ಬರೆದಿದ್ದಾರೆ.

‘ಬೆಳಿಗ್ಗೆ ಕಾಲೇಜು ಆವರಣ ಪ್ರವೇಶಿಸಿದರೆ ಮತ್ತೆ ಸಂಜೆಯೇ ಹೊರಕ್ಕೆ ಬರಬೇಕಿದೆ. ಕೆಲವು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ವಿದ್ಯಾರ್ಥಿ ಸಂಘ ಅಗತ್ಯವಿತ್ತು. ಆದರೆ, ಸಂಘದ ಚುನಾವಣೆಯನ್ನು ರದ್ದು ಮಾಡಲಾಗಿದೆ’ ಎಂದು ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.

‘ಶೈಕ್ಷಣಿಕ ಭಾಗವಾಗಿ ವಸ್ತ್ರ ಸಂಹಿತೆಯನ್ನು ಅಳವಡಿಕೆ ಮಾಡಿಕೊಳ್ಳಲಾಗಿತ್ತು. ಈ ನಿಯಮ ಪಾಲನೆ ಮಾಡುವಂತೆ ವಿದ್ಯಾರ್ಥಿಗಳ ಪೋಷಕರಿಗೂ ತಿಳಿಸಲಾಗಿತ್ತು. ಬೇರೆ ಸಂಸ್ಥೆಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೆಲವು ನಿಯಮಗಳನ್ನು ಸಡಿಲಿಕೆ ಮಾಡಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿರುವವರು ನಮ್ಮ ವಿದ್ಯಾರ್ಥಿಗಳೇ ಎಂಬುದು ಖಚಿತವಿಲ್ಲ. ಯಾರೂ ನನ್ನ ಬಳಿ ಮನವಿ ಮಾಡಿಲ್ಲ’ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರತಿಕ್ರಿಯಿಸಿದ್ದಾರೆ.

ರೌಂಡ್ ಹಾಗೂ ವಿನೆಕ್ ಟಿ–ಶರ್ಟ್, ಬೇರೆ ಬೇರೆ ಬರಹವುಳ್ಳ ಬಟ್ಟೆಗಳು, ಕಾರ್ಗೊ ಪ್ಯಾಂಟ್ಸ್, ಚಪ್ಪಲಿ ಹಾಕಿಕೊಂಡು ಬರುವುದನ್ನು ನಿರ್ಬಂಧಿಸಲಾಗಿದೆ. ಇದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.