ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಒಕ್ಕೂಟ ವ್ಯವಸ್ಥೆ ರಕ್ಷಣೆಗೆ ಆಗ್ರಹಿಸಿ ನಾಳೆ ಪ್ರತಿಭಟನಾ ಸಭೆ

Published : 12 ಸೆಪ್ಟೆಂಬರ್ 2024, 15:31 IST
Last Updated : 12 ಸೆಪ್ಟೆಂಬರ್ 2024, 15:31 IST
ಫಾಲೋ ಮಾಡಿ
Comments

ಬೆಂಗಳೂರು: ರಾಜ್ಯಗಳ ಅಸ್ಮಿತೆ ಮತ್ತು ಹಕ್ಕುಗಳ ರಕ್ಷಣೆಗಾಗಿ ಕೆ.ಆರ್. ವೃತ್ತದಲ್ಲಿರುವ ಯುವಿಸಿಇ ಅಲುಮ್ನಿ ಅಸೋಸಿಯೇಷನ್‌ನಲ್ಲಿ ಇದೇ ಶನಿವಾರ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ ಎಂದು ಒಕ್ಕೂಟ ಉಳಿಸಿ ಆಂದೋಲನ ಸಮಿತಿ ತಿಳಿಸಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಹಿತಿ ಎಸ್.ಜಿ. ಸಿದ್ಧರಾಮಯ್ಯ, ‘ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ. ರಾಜ್ಯಗಳ ಸಾಂವಿಧಾನಿಕ, ಶಾಸನಾತ್ಮಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಸ್ವಾಯತ್ತತೆ ರಕ್ಷಿಸಲು ಈ ಸಭೆ ಆಯೋಜಿಸಲಾಗಿದೆ’ ಎಂದು ದೂರಿದರು.

‘ಭಾರತದಲ್ಲಿ ಪ್ರಜಾಪ್ರಭುತ್ವ ಅಸ್ತಿತ್ವಕ್ಕೆ ಬಂದಾಗಿನಿಂದ ರಾಜ್ಯಗಳು ಮತ್ತು ಕೇಂದ್ರ ಸರ್ಕಾರದ ಮಧ್ಯೆ ತಿಕ್ಕಾಟಗಳು ಸಾಮಾನ್ಯವಾಗಿದ್ದವು. ಆದರೆ, ಕಳೆದ ಹತ್ತು ವರ್ಷಗಳಲ್ಲಿ ರಾಜ್ಯಗಳ ಮೇಲೆ ನಡೆಯುತ್ತಿರುವ ದಾಳಿ ಅತ್ಯಂತ ಅಪಾಯಕಾರಿ ಸ್ವರೂಪ ಪಡೆದಿದೆ. ಸ್ವತಂತ್ರ ತನಿಖಾ ಸಂಸ್ಥೆಗಳು ಇಂದು ವಿರೋಧಿಗಳ ಮೇಲೆ ಹೂಡಲಾದ ಬಾಣಗಳಂತೆ ಕೆಲಸ ಮಾಡುತ್ತಿವೆ’ ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಜೆ.ಎಂ. ವೀರಸಂಗಯ್ಯ ಮಾತನಾಡಿ, ‘2014ರಿಂದ ಈಚೆಗೆ ಕೇಂದ್ರ ಸರ್ಕಾರವು ರಾಜ್ಯಗಳ ಸ್ವಾಯತ್ತತೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುತ್ತಿದೆ. ಆದ್ದರಿಂದ ಒಕ್ಕೂಟ ವ್ಯವಸ್ಥೆ ಉಳಿಸಲು ಈ ಸಭೆ ಆಯೋಜಿಸಲಾಗುತ್ತಿದ್ದು, ಇದರ ಅಧ್ಯಕ್ಷತೆಯನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ವಹಿಸಲಿದ್ದಾರೆ’ ಎಂದರು.

ಲೇಖಕಿ ಕೆ. ಷರೀಫಾ ಸುದ್ದಿಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT