ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್)ನಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದ ಸಿನಿಮಾ ನಿರ್ಮಾಪಕ ಪ್ರಕಾಶ್ ಎಂಬಾತನನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.

ಕೆಎಂಎಫ್‌ನಲ್ಲಿ ಈಚೆಗೆ ತಾಂತ್ರಿಕ ಅಧಿಕಾರಿ ಹಾಗೂ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆದಿತ್ತು. ಪರಿಚಯಸ್ಥ ಅಭ್ಯರ್ಥಿಗಳಿಗೆ ನೌಕರಿ ಕೊಡಿಸುತ್ತೇನೆ ಎಂದು ಹೇಳಿ ಹಣ ಪಡೆದುಕೊಂಡಿದ್ದ. ಚಿಕ್ಕಬಳ್ಳಾಪುರ ತಾಲ್ಲೂಕಿನ ಚರಣ್‌ರಾಜ್ ಅವರಿಗೆ ನೌಕರಿ ಕೊಡಿಸುವುದಾಗಿ ಅವರಿಂದ ₹ 10 ಲಕ್ಷ ಪಡೆದುಕೊಂಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆರೋಪಿ ಪ್ರಕಾಶ್ ನಿವೇಶನವೊಂದನ್ನು ಮಾರಾಟ ಮಾಡಿ ‘ಶಬ್ಬಾಸ್ ಬಡ್ಡಿ ಮಗನೇ’ ಎಂಬ ಸಿನಿಮಾ ನಿರ್ಮಿಸುತ್ತಿದ್ದ. ಸಿನಿಮಾ ನಿರ್ಮಾಣಕ್ಕೆ ಹಣದ ಸಮಸ್ಯೆ ಎದುರಾಗಿತ್ತು. ಆಗ ನೌಕರಿ ಕೊಡಿಸುತ್ತೇನೆ ಎಂದು 10ಕ್ಕೂ ಹೆಚ್ಚು ಮಂದಿಯಿಂದ ಹಣ ಪಡೆದು ವಂಚಿಸಿದ್ದ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.