ಗಡಿಪಾರು ಕೇಂದ್ರ ಸ್ಥಾಪನೆಗೆ ಮನವಿ

7

ಗಡಿಪಾರು ಕೇಂದ್ರ ಸ್ಥಾಪನೆಗೆ ಮನವಿ

Published:
Updated:

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಬೆಂಗಳೂರಿನಲ್ಲಿ ಗಡಿಪಾರು ಕೇಂದ್ರ ಸ್ಥಾಪಿಸುವಂತೆ ಕೋರಿ ಸಂಸದ ಪಿ.ಸಿ.ಮೋಹನ್‌, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿದ್ದ ಸಂಸದ, ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬಾಂಗ್ಲಾ ವಲಸಿಗರ ಸಮಸ್ಯೆ ಮತ್ತು ಅವರಿಂದ ದೇಶದ ಸುರಕ್ಷತೆಗೆ ಆಗುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದ್ದಾರೆ.

‘ಕಲ್ಬುರ್ಗಿ ಶಾಸಕ ದತ್ತಾತ್ರೇಯ ಪಾಟೀಲ ಅವರೊಂದಿಗೆ ಸಚಿವರನ್ನು ಭೇಟಿ ಮಾಡಿದೆ. ವಿದೇಶಿಗರ ಕಾಯ್ದೆ ಅಡಿ ‘ಗಡಿಪಾರು ಕೇಂದ್ರ‘ ಸ್ಥಾಪಿಸುವಂತೆ ಒತ್ತಾಯಿಸಿದೆ. ಅದಕ್ಕೆ ಸ್ಪಂದಿಸಿರುವ ಸಚಿವರು, ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ  ಭರವಸೆ ನೀಡಿದ್ದಾರೆ’ ಎಂದು ಸಂಸದ ಮೋಹನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !