ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಮುಸ್ಲಿಮರು ಸಿ.ಎಂ ಆಗಲು ಬಿಡಲ್ಲ: ಎಂ.ಪಿ. ರೇಣುಕಾಚಾರ್ಯ

Last Updated 27 ಜುಲೈ 2022, 21:33 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕದಲ್ಲಿ ಯಾವತ್ತೂ ಮುಸ್ಲಿಮರು ಮುಖ್ಯಮಂತ್ರಿಯಾಗಲು ಬಿಡುವುದಿಲ್ಲ’ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿದ್ದೇವೆ ಎಂದು ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮ್ಮದ್ ಖಾನ್‌ ಹೋದಲ್ಲೆಲ್ಲ ಹೇಳುತ್ತಿದ್ದಾರೆ. ಜಮೀರ್‌ ಅವರಿಗೆ ತಾಕತ್ತಿದ್ದರೆ ಮುಸ್ಲಿಮರನ್ನು ಮುಖ್ಯಮಂತ್ರಿ ಮಾಡಿ ತೋರಿಸಲಿ. ಇದು ಹಿಂದೂಗಳೇ ಹೆಚ್ಚಿನ ಸಂಖ್ಯೆಯಲ್ಲಿರುವ ದೇಶ. ಇಲ್ಲಿ ಹಿಂದೂಗಳೇ ಮುಖ್ಯಮಂತ್ರಿ ಆಗಬೇಕು’ ಎಂದರು.

’ಮೌಲ್ವಿಗಳು, ಧರ್ಮ ಗುರುಗಳ ಪ್ರಚೋದನೆಯಿಂದ ಜಮೀರ್‌ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಹಿಂದೂ– ಮುಸ್ಲಿ ಮರ ನಡುವೆ ಕೋಮು ಭಾವನೆ ಕೆರಳಿಸುತ್ತಿದ್ದಾರೆ. ಅವರು ಇಂತಹ ಪ್ರಯತ್ನವನ್ನು ತಕ್ಷಣ ನಿಲ್ಲಿಸಬೇಕು ’ ಎಂದರು.

ಯುಪಿ ಮಾದರಿ ಬೇಕು: ‘ರಾಜ್ಯದಲ್ಲಿ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆ ನಿರಂತರವಾಗಿ ನಡೆಯುತ್ತಿದೆ. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ 10–15 ಜನ ಹಿಂದೂ ಕಾರ್ಯಕರ್ತರ ಹತ್ಯೆ ನಡೆದಿತ್ತು. ಈಗಲೂ ನಡೆಯುತ್ತಿದೆ. ಈ ರೀತಿ ದುಷ್ಕೃತ್ಯ ಎಸಗುವವರನ್ನು ನಿಯಂತ್ರಣದಲ್ಲಿಡಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ನೇತೃತ್ವದ ಸರ್ಕಾರದ ಮಾದರಿ ಅನುಸರಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT