ಶನಿವಾರ, ಜನವರಿ 23, 2021
25 °C

ಪರೀಕ್ಷೆ ಮುಂದೂಡಲು ತೇಜಸ್ವಿ ಸೂರ್ಯ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಡಿ.21 ಮತ್ತು 24ರಂದು ನಡೆಸಲು ಉದ್ದೇಶಿಸಿರುವ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರ ಹುದ್ದೆಗಳ ಪರೀಕ್ಷೆಯನ್ನು ಮುಂದೂಡಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಆಯೋಗದ ಅಧ್ಯಕ್ಷ ಷಡಕ್ಷರಿ ಸ್ವಾಮಿಯವರಿಗೆ ಪತ್ರ ಬರೆದಿರುವ ತೇಜಸ್ವಿ ಸೂರ್ಯ, ‘ಡಿ.22ರಂದು ಗ್ರಾಮ ಪಂಚಾಯಿತಿ ಚುನಾವಣೆಗಳು ನಿಗದಿಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಇದರಿಂದ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯಕ್ಕೆ ಹೋಗಬೇಕಾಗುತ್ತದೆ. ಅಭ್ಯರ್ಥಿಗಳು ಮತ್ತು ಸರ್ಕಾರಿ ನೌಕರರು ಮತದಾನದಿಂದಲೂ ವಂಚಿತರಾಗಬೇಕಾಗುತ್ತದೆ ಎಂದು ಹಲವು ಅಭ್ಯರ್ಥಿಗಳು ಹೇಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳೂ ನಿಗದಿಯಾಗಿರುವುದನ್ನು ಗಮನಕ್ಕೆ ತಂದಿದ್ದಾರೆ’ ಎಂದಿರುವ ಅವರು, ಪರೀಕ್ಷೆಯನ್ನು ಮುಂದೂಡಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು