ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಟ್ರೊ ನೇರಳೆ ಮಾರ್ಗದಲ್ಲಿ ಪ್ರಯಾಣಿಸಿದ ಸಂಸದ ಪಿ.ಸಿ. ಮೋಹನ್‌

Published 11 ಅಕ್ಟೋಬರ್ 2023, 14:51 IST
Last Updated 11 ಅಕ್ಟೋಬರ್ 2023, 14:51 IST
ಅಕ್ಷರ ಗಾತ್ರ

ಬೆಂಗಳೂರು: ಸಂಸದ ಪಿ.ಸಿ. ಮೋಹನ್‌ ಅವರು ಬುಧವಾರ ಮೆಟ್ರೊ ನೇರಳೆ ಮಾರ್ಗದಲ್ಲಿ ವೈಟ್‌ಫೀಲ್ಡ್‌ನಿಂದ (ಕಾಡುಗೋಡಿ) ಕಬ್ಬನ್‌ಪಾರ್ಕ್‌ವರೆಗೆ ಪ್ರಯಾಣಿಸಿ ಪರಿಶೀಲಿಸಿದರು.

ಕಾಡುಗೋಡಿಯಿಂದ ಚಲ್ಲಘಟ್ಟಕ್ಕೆ 43 ಕಿ.ಮೀ. ದೂರವಿದೆ. ಬಸ್‌ನಲ್ಲಿ ಪ್ರಯಾಣಿಸಲು ಕನಿಷ್ಠ 2 ತಾಸು ಬೇಕಾಗುತ್ತದೆ. ಮೆಟ್ರೊದಲ್ಲಿ ಕೇವಲ ₹ 60 ವೆಚ್ಚದಲ್ಲಿ 1 ಗಂಟೆ 20 ನಿಮಿಷಗಳಲ್ಲಿ ತಲುಪಬಹುದು. ಇದರಿಂದ ವಾಹನ ದಟ್ಟಣೆ ಕೂಡ ಕಡಿಮೆಯಾಗಲಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ವಿಐಪಿ ಸಮಾರಂಭಗಳನ್ನು ಬದಿಗೆ ಸರಿಸಿ ತಕ್ಷಣ ಮೆಟ್ರೊ ವಿಸ್ತರಿತ ಮಾರ್ಗದಲ್ಲಿ ರೈಲು ಸೇವೆ ಆರಂಭಿಸಲು ಸೂಚನೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಹಿತಾಸಕ್ತಿಯ ಬದ್ಧತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಶ್ಲಾಘಿಸಿದರು.

ಮೆಟ್ರೊ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ನಿತ್ಯ 6.2 ಲಕ್ಷ ಪ್ರಯಾಣಿಕರು ಸಂಚರಿಸುತ್ತಿದ್ದರು. ಈಗ ವಿಸ್ತರಿತ ಮಾರ್ಗದಲ್ಲಿ ಮೆಟ್ರೊ ರೈಲು ಸೇವೆ ಆರಂಭವಾಗಿದ್ದರಿಂದ ಪ್ರಯಾಣಿಕರ ಸಂಖ್ಯೆ 6.8 ಲಕ್ಷಕ್ಕೆ ಏರಿಕೆಯಾಗಿದೆ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT