ಬೆಂಗಳೂರು: ‘ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಪ್ರಕ್ರಿಯೆ ಶೀಘ್ರದಲ್ಲೇ ಮುಗಿಯಲಿದ್ದು, ಆಗಸ್ಟ್ 9ರ ನಂತರ ಕಾಲೇಜುಗಳ ಪುನರಾರಂಭಕ್ಕೆ ಯಾವುದೇ ಅಡಚಣೆ ಇಲ್ಲ’ ಎಂದು ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಎಂ.ಆರ್.ದೊರೆಸ್ವಾಮಿ ಸಲಹೆ ನೀಡಿದ್ದಾರೆ.

ಈ ಸಂಬಂಧ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

‘ಜುಲೈ ಎರಡನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ. ಮುಂದಿನ ಪ್ರವೇಶಾತಿ ಪ್ರಕ್ರಿಯೆಗೆ ಕನಿಷ್ಠ ಎರಡು ಅಥವಾ ಮೂರು ವಾರಗಳ ಕಾಲಾವಕಾಶ ನೀಡಿ, ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಆರಂಭಿಸಬಹುದು’ ಎಂದು ತಿಳಿಸಿದ್ದಾರೆ.

‘ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಜು.15 ರ ನಂತರ ನಡೆಸುವುದು ಸೂಕ್ತ. ಶಾಲೆಗಳ ಪುನರಾರಂಭ ಸಂಬಂಧ ಡಾ. ದೇವಿಶೆಟ್ಟಿ ನೇತೃತ್ವದ ಕಾರ್ಯಪಡೆ ಸೂಚಿಸಿರುವ ಶಿಫಾರಸುಗಳ ಅನ್ವಯ ಪ್ರಾರಂಭಿಸಬಹುದು. ಈ ಪ್ರಕ್ರಿಯೆಯನ್ನು ಇಡೀ ರಾಜ್ಯಕ್ಕೆ ಅನುಷ್ಠಾನಗೊಳಿಸುವ ಬದಲು ಆಯಾ ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ವಹಿಸಬೇಕು. ಶಿಕ್ಷಣ ಸಂಸ್ಥೆಗಳೂ ಶಿಫಾರಸುಗಳನ್ನು ತಪ್ಪದೇ ಪಾಲಿಸುವುದು ಕ್ಷೇಮ’ ಎಂದೂ ಸಲಹೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.