ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿದ್ವಾಯಿ: ಎಂಆರ್‌ಐ ಸ್ಕ್ಯಾನಿಂಗ್ ಸೇವೆ ವ್ಯತ್ಯಯ

Published 31 ಜನವರಿ 2024, 15:44 IST
Last Updated 31 ಜನವರಿ 2024, 15:44 IST
ಅಕ್ಷರ ಗಾತ್ರ

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ಕೆಟ್ಟು ಹೋಗಿರುವುದರಿಂದ ರೋಗಿಗಳು ಪರೀಕ್ಷೆಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. 

ಸಂಸ್ಥೆಯಲ್ಲಿ ಒಂದು ಎಂಆರ್‌ಐ ಸ್ಕ್ಯಾನಿಂಗ್ ಯಂತ್ರವಿದೆ. ಕಳೆದ 15 ದಿನಗಳಿಂದ ಈ ಯಂತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ರೋಗಿಗಳು ಎಂಆರ್‌ಐ ಸ್ಕ್ಯಾನಿಂಗ್ ಮಾಡಿಸಿಕೊಳ್ಳಲು ವಿಕ್ಟೋರಿಯಾ ಸೇರಿ ಕೆಲ ಆಸ್ಪತ್ರೆಗಳಿಗೆ ತೆರಳುತ್ತಿದ್ದಾರೆ. ಇನ್ನೂ ಕೆಲವರು ಖಾಸಗಿ ವ್ಯವಸ್ಥೆಯಡಿ ಮಾಡಿಸಿಕೊಳ್ಳುತ್ತಿದ್ದಾರೆ.

‘ಖಾಸಗಿ ವ್ಯವಸ್ಥೆಯಡಿ ಎಂಆರ್‌ಐ ಸ್ಕ್ಯಾನಿಂಗ್ ಮಾಡಿಸಿಕೊಳ್ಳಲು ₹ 8 ಸಾವಿರದಿಂದ ₹ 10 ಸಾವಿರ ವೆಚ್ಚವಾಗುತ್ತದೆ. ಇದರಿಂದಾಗಿ ಸಮಸ್ಯೆಯಾಗಿದೆ. ಆದಷ್ಟು ಬೇಗ ಕಿದ್ವಾಯಿ ಸಂಸ್ಥೆಯಲ್ಲಿನ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರವನ್ನು ದುರಸ್ಥಿಪಡಿಸಿ, ಪರೀಕ್ಷೆ ನಡೆಸಬೇಕು’ ಎಂದು ರೋಗಿಯೊಬ್ಬರು ಆಗ್ರಹಿಸಿದರು. 

‘ಕೆಟ್ಟಿರುವ ಯಂತ್ರದ ದುರಸ್ತಿಗೆ ಕ್ರಮವಹಿಸಲಾಗಿದೆ. ಈ ಯಂತ್ರ ಹಳೆಯದಾಗಿರುವುದರಿಂದ ಹೊಸ ಯಂತ್ರ ಖರೀದಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮತಿಗೆ ಕಾಯುತ್ತಿದ್ದೇವೆ’ ಎಂದು ಸಂಸ್ಥೆಯ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT