ಬೆಂಗಳೂರು: ಎಂಎಸ್ಆರ್ ನಗರದಲ್ಲಿರುವ ಎಂಎಸ್ ರಾಮಯ್ಯ ಸ್ಮಾರಕ ಆಸ್ಪತ್ರೆಗೆ ಅಸ್ಥಿಮಜ್ಜೆ ಕಸಿಗೆ ಅವಕಾಶ ನೀಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಮಾನವ ಅಂಗಾಂಗ ದಾನ ಕಸಿ ಕಾಯ್ದೆ 1994ರ ಅಡಿ ಐದು ವರ್ಷಗಳ ಅವಧಿಗೆ ಇಲಾಖೆ ಅನುಮತಿ ನೀಡಿದೆ. ರಾಜ್ಯ ಮಟ್ಟದಲ್ಲಿ ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆಯ (ಸೊಟ್ಟೊ) ಉಪ ನಿರ್ದೇಶಕ ಡಾ. ಅರುಣ್ ಕುಮಾರ್ ಡಿ.ಪಿ., ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಕ್ಲಿನಿಕಲ್ ಹೆಮಾಟಲಜಿ ವಿಭಾಗದ ಮುಖ್ಯಸ್ಥೆ ಮೀರಾ ವಿ. ಮತ್ತು ವಿಧಿವಿಜ್ಞಾನ ಔಷಧ ವಿಭಾಗದ ಮುಖ್ಯಸ್ಥ ಡಾ. ವೆಂಕಟ ರಾಘವ್ ಅವರನ್ನು ಒಳಗೊಂಡ ತಂಡ ಜ.24ರಂದು ಆಸ್ಪತ್ರೆಗೆ ಭೇಟಿ ನೀಡಿತ್ತು.

ಆಸ್ಪತ್ರೆಯ ಮೂಲಸೌಕರ್ಯ, ಶಸ್ತ್ರಚಿಕಿತ್ಸಾ ಕೊಠಡಿ, ವೈದ್ಯಕೀಯ ಉಪಕರಣ, ಪ್ರಯೋಗಾಲಯ, ತೀವ್ರ ನಿಗಾ ಘಟಕ ಸೇರಿ ವಿವಿಧ ವ್ಯವಸ್ಥೆಯನ್ನು ಪರಿಶೀಲಿಸಿ, ಅಸ್ಥಿಮಜ್ಜೆ ಕಸಿಗೆ ಅವಕಾಶ ನೀಡಲು ಶಿಫಾರಸು ಮಾಡಿತ್ತು. ಈ ನಿಟ್ಟಿನಲ್ಲಿ ಅವಕಾಶ ನೀಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.