ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಂ.ಎಸ್.ರಾಮಯ್ಯ: 233 ಪ್ರಾಜೆಕ್ಟ್ ಪ್ರದರ್ಶನ

Published 14 ಮೇ 2024, 16:36 IST
Last Updated 14 ಮೇ 2024, 16:36 IST
ಅಕ್ಷರ ಗಾತ್ರ

ಬೆಂಗಳೂರು: ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯವು ಪೀಣ್ಯದಲ್ಲಿರುವ ರಾಮಯ್ಯ ಟೆಕ್ನಾಲಜಿ ಕ್ಯಾಂಪನ್‌ನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ತಂತ್ರಜ್ಞಾನ ದಿನ ಕಾರ್ಯಕ್ರಮದಲ್ಲಿ ತಂತ್ರಜ್ಞಾನ ಆಧಾರಿತ 233 ಪ್ರಾಜೆಕ್ಟ್‌ಗಳನ್ನು ಪ್ರದರ್ಶಿಸಲಾಯಿತು. 

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಟಿಸಿಎಸ್ ಡೆಲಿವರಿ ಸೆಂಟರ್ ಮುಖ್ಯಸ್ಥ ಸುನೀಲ್ ದೇಶಪಾಂಡೆ, ಕೃತಕ ಬುದ್ಧಿಮತ್ತೆ ತಂತ್ರಜ್ಞಾನ, ಡ್ರೋನ್ ಹಾಗೂ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಪ್ರಗತಿಯ ಬಗ್ಗೆ ವಿವರಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕುಲದೀಪ್ ಕುಮಾ‌ರ್ ರೈನಾ, ವಿದ್ಯಾರ್ಥಿಗಳು ಹಾಗೂ ಅವರ ಮಾರ್ಗದರ್ಶಕರನ್ನು ಪ್ರಶಂಸಿಸಿದರು. 

ನಗರದ ವಿವಿಧ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಪದವಿ ಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್‌ಗಳು ಒಳಗೊಂಡಂತೆ ಅಂತಿಮ ವರ್ಷದ 800 ವಿದ್ಯಾರ್ಥಿಗಳು ವಿವಿಧ ಪ್ರಾಜೆಕ್ಟ್‌ಗಳನ್ನು ಪ್ರದರ್ಶಿಸಿದರು. ತೀರ್ಪುಗಾರರು ಮೌಲ್ಯಮಾಪನದ ಬಳಿಕ ಅತ್ಯುತ್ತಮ ಪ್ರಾಜೆಕ್ಟ್‌ಗಳಿಗೆ ಬಹುಮಾನ ನೀಡಲಾಯಿತು.

ರಾಮಯ್ಯ ಟೆಕ್ನಾಲಜಿ ಕ್ಯಾಂಪಸ್ ಡೀನ್ ಜಿ.ವಿ. ದೇಸಾಯಿ, ಸಹ ಡೀನ್ ನಯನಾ ಎನ್. ಪಾಟೀಲ ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT