ಹೆಸರಘಟ್ಟ: ಹೋಬಳಿಯಲ್ಲಿ ಪದವೀಧರರು, ಉನ್ನತ ಶಿಕ್ಷಣ ಪಡೆದವರು ಸ್ಪರ್ಧಿಸುವ ಮೂಲಕ ಪಂಚಾಯಿತಿ ಚುನಾವಣಾ ಕಣ ರಂಗೇರಿದೆ.

ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀತಕೆಂಪನಹಳ್ಳಿ ಗ್ರಾಮದಲ್ಲಿ ಎಂ.ಟೆಕ್ ಪದವೀಧರೆ ವಿ.ಶ್ವೇತಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.

‘ಗ್ರಾಮದಲ್ಲಿರುವ ಜನರು ಅನೇಕ ಮಾಹಿತಿಗಳನ್ನು ತಿಳಿದುಕೊಳ್ಳಲು ನನ್ನ ಬಳಿ ಬರುತ್ತಿದ್ದರು. ಯಾವ ಅರ್ಜಿ, ಎಲ್ಲಿ ಸಿಗುತ್ತದೆ ಎಂಬ ಪ್ರಾಥಮಿಕ ಮಾಹಿತಿಯೂ ಅವರಿಗೆ ಇಲ್ಲ. ಇಂತಹ ಮುಗ್ಧ ಜನರ ಧ್ವನಿಯಾಗಿ ಇರಬೇಕು ಎನ್ನುವ ಕಾರಣಕ್ಕಾಗಿ ಸ್ಪರ್ಧಿಸಿದ್ದೇನೆ’ ಎಂದು ಅವರು ಹೇಳುತ್ತಾರೆ.

‘ಹಳ್ಳಿಗಳಲ್ಲಿರುವ ಸಮಸ್ಯೆಗಳ ಬಗ್ಗೆ ಮಹಿಳೆಯರಿಗೆ ಚೆನ್ನಾಗಿ ತಿಳಿದಿರುತ್ತದೆ. ನನ್ನ ಊರು, ನನ್ನ ಜನರ ಬಗ್ಗೆ ಕಾಳಜಿ ಇರುವುದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ. ಗ್ರಾಮದಲ್ಲಿರುವ ಎಲ್ಲ ಮಕ್ಕಳಿಗೂ ಶಿಕ್ಷಣ ನೀಡಬೇಕೆಂಬ ಉದ್ದೇಶ ಹೊಂದಿದ್ದೇನೆ’ ಎಂದೂ ಅವರು ಹೇಳಿದರು.

‘ರಾಜಕೀಯ ಎಂದರೆ ಏನು ಎಂದು ಗೊತ್ತಿಲ್ಲದ ನನಗೆ ಕುಟುಂಬದ ಸದಸ್ಯರು ಮಾರ್ಗದರ್ಶನ ನೀಡುತ್ತಿದ್ದಾರೆ. ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಗ್ರಾಮದ ಏಳಿಗೆಗೆ ಶ್ರಮಿಸುವ ಗುರಿ ಹೊಂದಿದ್ದೇನೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.