ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಳುವವರಿಗೆ ಜನರ ಭಾವನೆ ತಲುಪಿಸುತ್ತಿರುವ ಮಠಗಳು: ಬಸವರಾಜ ಬೊಮ್ಮಾಯಿ

Last Updated 19 ಫೆಬ್ರುವರಿ 2023, 5:32 IST
ಅಕ್ಷರ ಗಾತ್ರ

ಬೆಂಗಳೂರು: ‘ಶ್ರದ್ಧೆಯ ಭಾವದ ಜೊತೆಗೆ ಜನರ ಭಾವನೆಗಳನ್ನು ಆಳುವವರಿಗೆ ಮುಟ್ಟಿಸುವ ಕೆಲಸ ಮಠಗಳಿಂದ ಆಗುತ್ತಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

‘ಮಠಗಳು ಆಶ್ರಯ, ಅನ್ನ, ಜ್ಞಾನ ಕೊಟ್ಟಿವೆ. ಇವುಗಳು ಇಲ್ಲದಿದ್ದರೆ ನಾವು ಸಂಸ್ಕೃತಿಯಲ್ಲಿ ಇಷ್ಟು ಮುಂದೆ ಬರಲು ಸಾಧ್ಯವಾಗುತ್ತಿರಲಿಲ್ಲ. ಮಠಗಳು ನಮ್ಮ ರಾಜ್ಯದ ಪರಂಪರೆ’ ಎಂದರು.

ಗೋವಿಂದರಾಜನಗರದ ಎಂ.ಸಿ. ಲೇಔಟ್‌ನಲ್ಲಿ ಬಿಬಿಎಂಪಿ ನಿರ್ಮಿಸಿರುವ ‘ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ’ ಇತ್ತೀಚೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ದೇಶದ ಎಲ್ಲ ಆಸ್ಪತ್ರೆಗಳಲ್ಲಿ ಆಯುಷ್‌ ವಿಭಾಗವನ್ನು ಪ್ರಧಾನಿ ಆರಂಭಿಸಿದ್ದಾರೆ. ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲೂ ಆಯುರ್ವೇದ ವಿಭಾಗ ಪ್ರಾರಂಭಿಸಬೇಕು ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾ ‌ಮಠದ ಸಿದ್ದಲಿಂಗ ಸ್ವಾಮೀಜಿ, ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ, ಸಚಿವರಾದ ವಿ.ಸೋಮಣ್ಣ, ಆರ್. ಅಶೋಕ, ಕೆ.ಗೋಪಾಲಯ್ಯ, ಡಾ.ಕೆ.ಸುಧಾಕರ್, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT