ಸೋಮವಾರ, ಏಪ್ರಿಲ್ 19, 2021
29 °C

ಮುಂಬೈ–ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತ: ಕಿಲೋಮೀಟರ್‌ ಗಟ್ಟಲೇ ನಿಂತ ವಾಹನಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಂಬೈ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು ರಸ್ತೆಯಲ್ಲಿ ಕಿಲೋಮೀಟರ್ ಗಟ್ಟಲೇ ವಾಹನಗಳು ನಿಂತಿವೆ.

ದಾಬಸ್‌ಪೇಟೆ ಸಮೀಪ ಬೆಳಗ್ಗೆ 4 ಗಂಟೆ ಸುಮಾರಿಗೆ ಎರಡು ಲಾರಿಗಳ ಮಧ್ಯೆ ಅಪಘಾತ ಸಂಭವಿಸಿದ್ದು ಲಾರಿಗಳು ರಸ್ತೆಗೆ ಅಡ್ಡವಾಗಿ ಬಿದ್ದಿರುವುದರಿಂದ ಸಂಚಾರ ಬಂದ್‌ ಆಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬೆಳಗ್ಗೆ 5 ಗಂಟೆ ಸುಮಾರಿಗೆ ತೆರವು ಕಾರ್ಯಾಚರಣೆ ನಡೆಸಲು ಕ್ರೈನ್‌ ಅಪಘಾತ ಸ್ಥಳಕ್ಕೆ ತೆರಳಿದೆ ಎಂದು ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿರುವ ಟ್ರಕ್‌ ಚಾಲಕರು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯ ಎರಡು ಬದಿಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು ಸುಮಾರು 8 ರಿಂದ 10 ಕಿ.ಮೀ,ವರೆಗೂ ವಾಹಗಳು ನಿಂತಿವೆ.
 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು