ಬೆಂಗಳೂರು: ಬೇಸಿಗೆಯ ದಿನಗಳಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ಮತ್ತು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸುವುದಾಗಿ ಮಧ್ಯ ರೈಲ್ವೆಯು ಸೂಚಿಸಿದೆ.

ರೈಲು ಸಂಖ್ಯೆ 01013 ಲೋಕಮಾನ್ಯ ತಿಲಕ್ ಟರ್ಮಿನಸ್–ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಏಪ್ರಿಲ್ 19 ರಿಂದ ಜುಲೈ 12, 2026 ರವರೆಗೆ ಪ್ರತಿ ಭಾನುವಾರ ಬೆಳಿಗ್ಗೆ 11:50 ಗಂಟೆಗೆ ಲೋಕಮಾನ್ಯ ತಿಲಕ್ ಟರ್ಮಿನಸ್ ನಿಂದ ಹೊರಟು, ಸೋಮವಾರ ಬೆಳಿಗ್ಗೆ 11:45 ಗಂಟೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.

ಮರು ಪ್ರಯಾಣದಲ್ಲಿ, ರೈಲು ಸಂಖ್ಯೆ 01014 ಎಸ್ಎಂವಿಟಿ ಬೆಂಗಳೂರು–ಲೋಕಮಾನ್ಯ ತಿಲಕ್ ಟರ್ಮಿನಸ್ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಏಪ್ರಿಲ್ 20 ರಿಂದ ಜುಲೈ 13, 2026 ರವರೆಗೆ ಪ್ರತಿ ಸೋಮವಾರ ಮಧ್ಯಾಹ್ನ 01:50 ಗಂಟೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಹೊರಟು, ಮಂಗಳವಾರ ಮಧ್ಯಾಹ್ನ 01:30 ಗಂಟೆಗೆ ಲೋಕಮಾನ್ಯ ತಿಲಕ್ ಟರ್ಮಿನಸ್ ತಲುಪಲಿದೆ. ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಒಟ್ಟು 13 ಟ್ರಿಪ್ಗಳನ್ನು ಪೂರೈಸಲಿವೆ.

ಮಾರ್ಗಮಧ್ಯೆ, ಈ ರೈಲುಗಳು ಠಾಣೆ, ಕಲ್ಯಾಣ್, ಲೋನಾವಾಲಾ, ಪುಣೆ, ಸತಾರಾ, ಕರಾಡ್, ಸಾಂಗ್ಲಿ, ಮಿರಜ್, ರಾಯಬಾಗ್, ಘಟಪ್ರಭಾ, ಬೆಳಗಾವಿ, ಲೋಂಡಾ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿವೆ. ಈ ರೈಲು ಎಸಿ, ಸ್ಲೀಪರ್, ಜನರಲ್ ಮತ್ತು ಎಸ್ಎಲ್ಆರ್ಡಿ ಬೋಗಿಗಳನ್ನು ಒಳಗೊಂಡ ಒಟ್ಟು 22 ಬೋಗಿಗಳನ್ನು ಹೊಂದಿರುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.