ಬೆಂಗಳೂರು: ಜಯನಗರ 2ನೇ ಬ್ಲಾಕ್ನ ಟಿ.ಮರಿಯಪ್ಪ ರಸ್ತೆಯಲ್ಲಿರುವ ಮಿಟ್ಲಿಮರದ ಮುನೇಶ್ವರಸ್ವಾಮಿಯ ದೇವರ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ, ಮಹಾಕುಂಭಾಭಿಷೇಕ ಕಾರ್ಯಕ್ರಮ ಸಡಗರದಿಂದ ನಡೆಯಿತು.

6 ಅಡಿ ಎತ್ತರದ ಕೃಷ್ಣ ಶಿಲೆಯಿಂದ ಮುನೇಶ್ವರ ಸ್ವಾಮಿಯ ಮೂರ್ತಿಯನ್ನು ಅರುಣ್ಯೋಗಿರಾಜ್ ಕೆತ್ತಿದ್ದರು. ₹ 4 ಕೋಟಿ ವೆಚ್ಚದಲ್ಲಿ ದೇವಾಲಯದ ಕಟ್ಟಡ ನಿರ್ಮಾಣ ಮಾಡಿದ್ದು, 5 ಎತ್ತರದ ರಾಜಗೋಪುರಗಳನ್ನು ಒಳಗೊಂಡಿದೆ. ಬಹುತೇಕ ಕಲ್ಲಿನ ಕೆತ್ತನೆಯಿಂದ ಕೂಡಿದೆ. ಎಸ್.ಆರ್.ನರಸಿಂಹಮೂರ್ತಿ ಅವರ ನೇತೃತ್ವದಲ್ಲಿ 40ಕ್ಕೂ ಹೆಚ್ಚು ಅರ್ಚಕರಿಂದ ವಿವಿಧ ಹೋಮ-ಹವನಗಳು, ವಿಶೇಷ ಪೂಜೆಗಳು ಜರುಗಿದವು.

ಮುನೇಶ್ವರ ದೇವಸ್ಥಾನ ಅಭಿವೃದ್ದಿ ಸಂಘ ಟ್ರಸ್ಟ್ ಅಧ್ಯಕ್ಷ ಕೆ.ಎಂ.ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಶಾಸಕ ಡಿ. ಹೇಮ ಚಂದ್ರಸಾಗರ್, ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ, ದಿ ಜಯನಗರ ಕೋ-ಆಪರೇಟಿವ್ ಹೌಸಿಂಗ್ ಸೊಸೈಟಿ ಅಧ್ಯಕ್ಷ ಬಿ.ಆರ್. ವಾಸುದೇವ್, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ, ಮಾಜಿ ಶಾಸಕ ಕೆ. ಚಂದ್ರಶೇಖರ್, ಬಿಎಂಟಿಸಿ ಮಾಜಿ ಅಧ್ಯಕ್ಷ ವಿ.ಎಸ್.ಆರಾಧ್ಯ, ಶಿಲ್ಪಿ ಅರುಣ್ ಯೋಗಿರಾಜ್, ಟಿಟಿಡಿಯ ಕೆ.ಎನ್. ರಾಮಕೃಷ್ಣ ಭಾಗವಹಿಸಿದ್ದರು.

ದೇವರನ್ನು ನಂಬಿದರೆ ಯಶಸ್ಸು ಆರೋಗ್ಯ ಸುಖ- ಶಾಂತಿ ಸಿಗಲಿದೆ. ನಂಬಿದ ಭಕ್ತರನ್ನು ಭಗವಂತ ಯಾವತ್ತೂ ಕೈ ಬಿಡುವುದಿಲ್ಲ.
ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.