ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ

Published 14 ಮೇ 2024, 18:24 IST
Last Updated 14 ಮೇ 2024, 18:24 IST
ಅಕ್ಷರ ಗಾತ್ರ

ಬೆಂಗಳೂರು: ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯ ಜಯನಗರದ 7ನೇ ಹಂತದಲ್ಲಿ ವ್ಯಕ್ತಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ.

ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

‘ಜಯನಗರದ 7ನೇ ಹಂತದಲ್ಲಿ ಓಡಾಡಿಕೊಂಡಿದ್ದ ವ್ಯಕ್ತಿ, ಎಲ್ಲೆಂದರಲ್ಲಿ ಮಲಗುತ್ತಿದ್ದ. ಸೋಮವಾರ ರಾತ್ರಿ ವ್ಯಕ್ತಿಯೊಬ್ಬನ ಜತೆಗೆ ಗಲಾಟೆ ಮಾಡಿಕೊಂಡಿದ್ದ ಎಂಬುದು ಸ್ಥಳೀಯರಿಂದ ಗೊತ್ತಾಗಿದೆ. ಬಳಿಕ ರಸ್ತೆ ಬದಿ ಮಲಗಿದ್ದ. ತಡರಾತ್ರಿ ಭಾರಿ ಮಳೆ ಸುರಿಯುತ್ತಿದ್ದರಿಂದ ಅಂಗಡಿ ಮುಂಭಾಗ ಮಲಗಿದ್ದಾನೆ. ಈ ವೇಳೆ ಆತನ ಮೇಲೆ ಕಿಡಿಗೇಡಿಗಳು ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪರಾರಿ ಆಗಿದ್ದಾರೆ. ವಿಚಾರ ತಿಳಿದು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲಿಸಲಾಯಿತು. ಮೃತದೇಹವನ್ನು ಶವಾಗಾರದಲ್ಲಿ ಇಡಲಾಗಿದೆ. ವ್ಯಕ್ತಿಯ ಕುಟುಂಬಸ್ಥರು ಪತ್ತೆಯಾದ ಮೇಲೆ ಮೃತದೇಹ ಹಸ್ತಾಂತರ ಮಾಡಲಾಗುವುದು’ ಎಂದು ಪೊಲೀಸರು ತಿಳಿಸಿದರು.

ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT