ಕೋಲಾರದಲ್ಲಿ ಆರೋಪಿ ತಲೆಮರೆಸಿಕೊಂಡ ಮಾಹಿತಿ ಮೇರೆಗೆ ಚಾಮರಾಜಪೇಟೆ ಠಾಣೆ ಪೊಲೀಸರು ಅಲ್ಲಿಗೆ ತೆರಳಿದ್ದರು. ಕೋಲಾರದ ಹೊರವಲಯದಲ್ಲಿ ಆಶ್ರಯ ಪಡೆದುಕೊಂಡಿದ್ದ ಎಂಬುದು ಗೊತ್ತಾಗಿತ್ತು. ಬಳಿಕ ಪೊಲೀಸರು ಹೋಗುವಷ್ಟರಲ್ಲಿ ಸಮೀಪದಲ್ಲಿ ಇರುವ ತನ್ನ ಚಿಕ್ಕಮ್ಮನ ಮನೆಗೆ ತೆರಳಿದ್ದ. ಪೊಲೀಸರು ಅಲ್ಲಿಗೂ ತೆರಳಿದ್ದರು. ಈ ವಿಚಾರ ತಿಳಿದ ಆರೋಪಿ, ಪೊಲೀಸರಿಂದ ತಪ್ಪಿಸಿಕೊಳ್ಳಲು ಮನೆಯ ಮಹಡಿ ಮೇಲೆ ಏರಿದ್ದ. 12 ಅಡಿ ಎತ್ತರದ ಕಟ್ಟಡದಿಂದ ಜಿಗಿದು ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ. ಸಮೀಪದ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಕೊಲೆ ಆರೋಪಿ ಮೃತಪಟ್ಟಿದ್ದಾನೆ ಎಂದು ಮೂಲಗಳು ಹೇಳಿವೆ.