ಸೋಮವಾರ, ಆಗಸ್ಟ್ 8, 2022
23 °C

ಕೊಲೆ ಪ್ರಕರಣ: ಒಂದೂವರೆ ಕೆ.ಜಿ ಚಿನ್ನದ ಸಮೇತ ಮತ್ತೊಬ್ಬ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿಕ್ಕಪೇಟೆಯಲ್ಲಿರುವ ‘ದೀಪಂ ಎಲೆಕ್ಟ್ರಿಕಲ್ಸ್‌’ ಮಳಿಗೆ ಮಾಲೀಕ ಜುಗರಾಜ್‌ ಜೈನ್‌ (74) ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿ ಓಂರಾಮ್ ದೇವಸಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

‘ಜುಗರಾಜ್ ಅವರನ್ನು ಮೇ 24 ರಂದು ಕೊಲೆ ಮಾಡಲಾಗಿತ್ತು. ಈ ಸಂಬಂಧ ಕೆಲಸಗಾರ ಬಿಜರಾಮ್ (24), ಈತನ ಸ್ನೇಹಿತರಾದ ಪೂರನ್ ರಾಮ್ ದೇವಸಿ (26) ಹಾಗೂ ಮಹೇಂದ್ರ ದೇವಸಿಯನ್ನು (27) ಈ ಹಿಂದೆಯೇ ಬಂಧಿಸಲಾಗಿತ್ತು. ಇದೀಗ ಓಂರಾಮ್‌ನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಕೊಲೆ ಬಳಿಕ ಚಿನ್ನಾಭರಣ ಸಮೇತ ಪರಾರಿಯಾಗಿದ್ದ ಓಂರಾಮ್, ರಾಜಸ್ಥಾನ್‌ದಲ್ಲಿ ತಲೆಮರೆಸಿಕೊಂಡಿದ್ದ. ಆತನ ವಿಳಾಸ ಪತ್ತೆ ಮಾಡಿದ್ದ ವಿಶೇಷ ತಂಡ, ರಾಜಸ್ಥಾನಕ್ಕೆ ಹೋಗಿ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತಂದಿದೆ. ಈತನಿಂದ ಒಂದೂವರೆ ಕೆ.ಜಿ ಚಿನ್ನಾಭರಣ ಹಾಗೂ ₹ 16 ಲಕ್ಷ ನಗದು ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು