ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಐಟಿಸಿ ಕಾರ್ಖಾನೆ ಉದ್ಯೋಗಿಯ ಕೊಲೆ

Published 3 ಜುಲೈ 2024, 15:53 IST
Last Updated 3 ಜುಲೈ 2024, 15:53 IST
ಅಕ್ಷರ ಗಾತ್ರ

ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಪುಲಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಗುಂಟೆಯಲ್ಲಿ ಬುಧವಾರ ನಡೆದಿದೆ.

ಬಾಣಸವಾಡಿ ನಿವಾಸಿ ಅಜಿತ್ (35) ಕೊಲೆಯಾದವರು.

‘ಅಜಿತ್‌ ಅವರು ಐಟಿಸಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ಬೆಳಿಗ್ಗೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಾಲ್ಕೈದು ಜನರಿದ್ದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದೆ’ ಎಂದು ಪೊಲೀಸರು ತಿಳಿಸಿದರು.

‘ಅಜಿತ್ ಅವರು ಬಹಳಷ್ಟು ಜನರ ಬಳಿ ಬಡ್ಡಿಗೆ ಹಣ ಪಡೆದು ವಾಪಸ್ ಕೊಡದೇ ಸತಾಯಿಸುತ್ತಿದ್ದರು. ಇದೇ ಕಾರಣಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ’ ಎಂದು ಹೇಳಿದರು.

ಘಟನಾ ಸ್ಥಳಕ್ಕೆ ಪುಲಕೇಶಿನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ‘ಕೊಲೆಯಾಗಿರುವ ಸ್ಥಳದ ಅಕ್ಕಪಕ್ಕದ ಸಿ.ಸಿ.ಟಿ.ವಿ. ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT