ಬೆಂಗಳೂರು: ಹಣದ ವಿಚಾರಕ್ಕೆ ಸ್ನೇಹಿತರಿಬ್ಬರ ಮಧ್ಯೆ ನಡೆದ ಗಲಾಟೆಯಲ್ಲಿ ಶೋಯಬ್ ಎಂಬುವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಪ್ರಯತ್ನಿಸಿದ ಆರೋಪದ ಮೇರೆಗೆ ಆರು ಮಂದಿಯನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಮೂವರು ತಲೆಮರೆಸಿಕೊಂಡಿದ್ದಾರೆ.
ದಾವೂದ್ ಮತ್ತು ಶೋಯೆಬ್ ಕಾಲೇಜು ಸಹಪಾಠಿಗಳು. ದಾವೂದ್ ಚಹಾ ಅಂಗಡಿ ಇಟ್ಟುಕೊಂಡಿದ್ದರು. ನಿರುದ್ಯೋಗಿಯಾಗಿದ್ದ ಶೋಯಬ್, ದಾವೂದ್‌ನಿಂದ ₹1.7 ಲಕ್ಷ ಹಣ ಪಡೆದಿದ್ದ. ಹಣ ವಾಪಸ್ ನೀಡುವ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಈ ವೇಳೆ ದಾವೂದ್, ಶೋಯಬ್‌ಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಆರು ಆರೋಪಿಗಳನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಮೂವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.