ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಳು ಬಿದ್ದ ಶಿಕ್ಷಕರ ವಸತಿನಿಲಯ

Last Updated 25 ಮೇ 2018, 3:05 IST
ಅಕ್ಷರ ಗಾತ್ರ

ಅಫಜಲಪುರ: ತಾಲ್ಲೂಕಿನ ಮಾಶಾಳ ಗ್ರಾಮದಲ್ಲಿ ಸರ್ಕಾರ ಶಿಕ್ಷಕರ ವಸತಿಗಾಗಿ ನಿರ್ಮಿಸಿದ ವಸತಿ ನಿಲಯ ಕಳೆದ 10 ವರ್ಷಗಳಿಂದ ಪಾಳುಬಿದ್ದಿದೆ.

ತಾಲ್ಲೂಕು ಕೇಂದ್ರದಿಂದ 30 ಕಿ.ಮೀ. ದೂರದಲ್ಲಿರುವ ಮಹಾರಾಷ್ಟ್ರ ಗಡಿ ಭಾಗದ ಮಾಶಾಳ ಗ್ರಾಮದಲ್ಲಿ 10 ವರ್ಷಗಳ ಹಿಂದೆ ಸರ್ಕಾರ ಶಿಕ್ಷಕರು ವಾಸ ಮಾಡಲು ವಸತಿ ನಿಲಯ ನಿರ್ಮಾಣ ಮಾಡಲಾಗಿದೆ. ಆದರೆ, ಇಲ್ಲಿಯವರೆಗೂ ಅದು ಬಳಕೆಯಾಗಿಲ್ಲ. ಹಾಳಾಗಿರುವ ವಸತಿ ನಿಲಯವನ್ನು ಈಚೆಗೆ ದುರಸ್ತಿ ಮಾಡಲಾಗಿದೆ. ಆದರೂ ಅದನ್ನು ಇನ್ನೂವರೆಗೆ ಶಿಕ್ಷಣ ಇಲಾಖೆಗೆ ವರ್ಗಾವಣೆ ಮಾಡಿಲ್ಲ.

ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ ಅವರನ್ನು ವಿಚಾರಿಸಿದಾಗ, ‘ನನಗೆ ಅದರ ಬಗ್ಗೆ ಮಾಹಿತಿ ಇಲ್ಲ. ವಿಚಾರಣೆ ಮಾಡಿ ಅದು ಬಳಕೆ ಯಾಗುವಂತೆ ನೋಡಿಕೊಳ್ಳುತ್ತೇನೆ’ ಎಂದರು.

ಮಾಶಾಳ ತಾಲ್ಲೂಕು ಪಂಚಾಯಿತಿ ಸದಸ್ಯ ರಾಜಕುಮಾರ ಬಬಲಾದ ಅವರ ಹೇಳಿಕೆಯಂತೆ, ‘ಲೊಕೋಪಯೋಗಿ ಇಲಾಖೆ ಅಫಜಲಪುರ ವಿಭಾಗದವರು ಶಿಕ್ಷಕರ ವಸತಿ ನಿಲಯ ನಿರ್ಮಾಣ ಮಾಡಿದ್ದಾರೆ. ಆದರೆ, ಇನ್ನೂವರೆಗೂ ಸಂಬಂಧ ಪಟ್ಟ ಇಲಾಖೆಗೆ ಹಸ್ತಾಂತರ ಮಾಡಿಲ್ಲ. ಈ ಕುರಿತು ತಾ.ಪ‍ಂ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮಾಶಾಳ ಗ್ರಾಮಕ್ಕೆ ಭೇಟಿ ನೀಡಿ ಶಿಕ್ಷಕರ ವಸತಿ ನಿಲಯವನ್ನು ಪರಿಶೀಲನೆ ಮಾಡಿ ಅದನ್ನು ಉಪಯೋಗ ವಾಗುವಂತೆ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT