ಶುಕ್ರವಾರ, ಜೂಲೈ 10, 2020
22 °C

ಬೆಂಗಳೂರು | ಚಾಕುವಿನಿಂದ ಇರಿದು ಕೊಲೆ: ಇಬ್ಬರು ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹದೇವಪುರ ಠಾಣೆ ವ್ಯಾಪ್ತಿಯ ಉದಯನಗರ ಮುಖ್ಯರಸ್ತೆಯಲ್ಲಿ ಲೋಕೇಶ್ವರ್ ರಾವ್ (31) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಸ್ಥಳೀಯ ನಿವಾಸಿ ಲೋಕೇಶ್ವರ್, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು. ಬುಧವಾರ ಸಂಜೆ ಉದಯನಗರ ಮುಖ್ಯರಸ್ತೆಯಲ್ಲಿ ಹೊರಟಿದ್ದಾಗಲೇ ಅಡ್ಡಗಟ್ಟಿದ್ದ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದರು’ ಎಂದು ಪೊಲೀಸರು ಹೇಳಿದರು.

‘ತೀವ್ರ ಗಾಯಗೊಂಡಿದ್ದ ಲೋಕೇಶ್ವರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಲೋಕೇಶ್ವರ್ ಅವರ ಸಹೋದರ ದೂರು ನೀಡಿದ್ದಾರೆ’ ಎಂದರು.

‘ಹಳೇ ವೈಷಮ್ಯದಿಂದಾಗಿ ಈ ಕೊಲೆ ನಡೆದಿರುವ ಅನುಮಾನವಿದೆ. ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದೂ ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು