ಸೋಮವಾರ, ಜುಲೈ 13, 2020
29 °C

ಕಪಾಳಕ್ಕೆ ಹೊಡೆದ ಸೇಡು ಚಾಕುವಿನಿಂದ ಇರಿದು ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಅಸ್ಕರ್ (20) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

‘ಸ್ಥಳೀಯ ನಿವಾಸಿಯಾದ ಅಸ್ಕರ್ ಕೆಲಸ ಮುಗಿಸಿ ಮನೆಗೆ ಹೊರಟಿದ್ದಾಗಲೇ ಅಡ್ಡಗಟ್ಟಿ ದಾಳಿ ಮಾಡಿದ್ದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿದ್ದ ಅಸ್ಕರ್‌ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಅಸುನೀಗಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಕೊಲೆಯಾದ ಅಸ್ಕರ್ ಹಾಗೂ ಸ್ಥಳೀಯ ನಿವಾಸಿ ತಬ್ರೇಜ್ ಎಂಬಾತನ ನಡುವೆ ಇತ್ತೀಚೆಗಷ್ಟೇ ಜಗಳ ಆಗಿತ್ತು. ತಬ್ರೇಜ್, ಅಸ್ಕರ್ ಕಪಾಳಕ್ಕೆ ಹೊಡೆದಿದ್ದ. ಸ್ಥಳೀಯರು ಜಗಳ ಬಿಡಿಸಿದ್ದರು.’

‘ಕಪಾಳಕ್ಕೆ ಹೊಡೆದ ತಬ್ರೇಜ್‌ ನನ್ನು ಕೊಂದು ಸೇಡು ತೀರಿಸಿಕೊಳ್ಳುವುದಾಗಿ ಅಸ್ಕರ್ ಕೂಗಾಡಿದ್ದರು. ಸ್ನೇಹಿತರ ಬಳಿಯೂ ಆ ಬಗ್ಗೆ ಹೇಳಿಕೊಂಡಿದ್ದರು. ಈ ವಿಷಯ ಗೊತ್ತಾಗಿ ತಬ್ರೇಜ್‌ನೇ ತನ್ನ ಸಹಚರರ ಜೊತೆ ಸೇರಿ ಈ ಕೊಲೆ ಮಾಡಿರುವ ಅನುಮಾನವಿದೆ. ಆತ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು