ಶನಿವಾರ, ಜುಲೈ 31, 2021
27 °C

ಕುಡಿದ ಅಮಲಿನಲ್ಲಿ ಜಗಳ: ಸ್ನೇಹಿತನ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಸ್ನೇಹಿತರ ನಡುವೆ ಜಗಳವಾಗಿದ್ದು, ಮಣಿ ಎಂಬುವರನ್ನು ಕೊಲೆ ಮಾಡಲಾಗಿದೆ.

‘ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಕೃತ್ಯ ಎಸಗಿರುವ ಸ್ನೇಹಿತರು ಸ್ಥಳದಿಂದ ಪರಾರಿಯಾಗಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಸ್ಥಳೀಯ ನಿವಾಸಿಯಾದ ಮಣಿ ಹಾಗೂ ಸ್ನೇಹಿತರು ಮದ್ಯದ ಪಾರ್ಟಿ ಮಾಡಲೆಂದು ಕೊಠಡಿಯೊಂದಕ್ಕೆ ಹೋಗಿದ್ದರು. ಅಲ್ಲಿ ಅವರೆಲ್ಲ ಮದ್ಯ ಕುಡಿದಿದ್ದರು. ಇದೇ ಸಂದರ್ಭದಲ್ಲೇ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿತ್ತು.’

‘ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಮಣಿ ಮೇಲೆ ದಾಳಿ ಮಾಡಿದ್ದ ಆರೋಪಿಗಳು ಕೊಲೆ ಮಾಡಿದ್ದರು. ತೀವ್ರ ರಕ್ತಸ್ರಾವದಿಂದ ಮಣಿ ಸ್ಥಳದಲ್ಲಿ ಅಸುನೀಗಿದ್ದಾರೆ’ ಎಂದೂ ಪೊಲೀಸರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು