ಮಂಗಳವಾರ, ಜೂಲೈ 7, 2020
29 °C

ರೌಡಿ ಕೊಲೆ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿಕ್ಕಜಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ರೌಡಿ ಸುಬ್ರಹ್ಮಣ್ಯ (30) ಎಂಬಾತನ ಕೊಲೆ ಸಂಬಂಧ ಆರೋಪಿ ಗಜ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಸ್ಥಳೀಯ ನಿವಾಸಿಯಾದ ಸುಬ್ರಹ್ಮಣ್ಯ, ಶುಕ್ರವಾರ (ಜೂನ್ 26) ಸಂಜೆ 6 ಗಂಟೆ ಸುಮಾರಿಗೆ ಮೀನುಕುಂಟೆ ಹೊಸೂರು ಬಳಿ ಹೊರಟಿದ್ದ. ಅದೇ ವೇಳೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳ ತಂಡ, ಆತನ ಮೇಲೆ ದಾಳಿ ಮಾಡಿ ಕೊಲೆ ಮಾಡಿತ್ತು’ ಎಂದು ಪೊಲೀಸರು ಹೇಳಿದರು.

‘ಕೊಲೆ, ಕೊಲೆ ಯತ್ನ, ಸುಲಿಗೆ ಸೇರಿದಂತೆ 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸುಬ್ರಹ್ಮಣ್ಯ, ಹಲವು ಬಾರಿ ಜೈಲಿಗೂ ಹೋಗಿ ಬಂದಿದ್ದ. ಆರೋಪಿ ಗಜ ಜೊತೆ ಗಲಾಟೆ ಮಾಡಿಕೊಂಡಿದ್ದ. ಗಜನನ್ನು ಹೊಡೆಯುವುದಾಗಿ ಸುಬ್ರಹ್ಮಣ್ಯ, ಸ್ನೇಹಿತರ ಬಳಿ ಹೇಳಿ
ಕೊಂಡು ಓಡಾಡುತ್ತಿದ್ದ. ಅದು ಗೊತ್ತಾಗುತ್ತಿದ್ದಂತೆ ಆರೋಪಿ ಗಜ, ತನ್ನ ಸಹಚರರ ಜೊತೆ ಸೇರಿ ಈ ಕೊಲೆ ಮಾಡಿದ್ದಾನೆ. ಈ ಬಗ್ಗೆ
ಆತ ತಪ್ಪೊಪ್ಪಿಕೊಂಡಿದ್ದಾನೆ. ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಶಾಮೀಲಾಗಿದ್ದು, ಅವರು ತಲೆಮರೆಸಿಕೊಂಡಿದ್ದಾರೆ’ ಎಂದೂ ಪೊಲೀಸರು ಹೇಳಿದರು.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು