ಶುಕ್ರವಾರ, ಸೆಪ್ಟೆಂಬರ್ 17, 2021
24 °C

ಲಾಕ್‌ಡೌನ್ | ಮದ್ಯಕ್ಕಾಗಿ ಪೀಡಿಸುತ್ತಿದ್ದ ರೌಡಿಯನ್ನೇ ಕೊಂದಿದ್ದರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ರೌಡಿ ಪ್ರಕಾಶ್ ಅಲಿಯಾಸ್ ಲೂಸ್ ಎಂಬಾತನ ಕೊಲೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

‘ರಾಜಾನುಕುಂಟೆಯ ಲೋಕೇಶ್ ಹಾಗೂ‌ ಸಿಂಗನಾಯಕನಹಳ್ಳಿ ನಿಖಿಲ್ ಬಂಧಿತರು. ಮದ್ಯ ಕೊಡಿಸುವಂತೆ ರೌಡಿ ಪ್ರಕಾಶ್ ಆರೋಪಿಗಳ ಬೆನ್ನು ಬಿದ್ದಿದ್ದ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಇದರಿಂದ ಸಿಟ್ಟಾದ ಆರೋಪಿಗಳು ಆತನನ್ನು ಕೊಲೆ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.

‘ಲಾಕ್‌ಡೌನ್‌ನಿಂದಾಗಿ ಎಲ್ಲೆಡೆ ಮದ್ಯ ಮಾರಾಟ ಬಂದ್ ಆಗಿದೆ. ತಮ್ಮ ಪರಿಚಯಸ್ಥರ ಬಳಿ ಮದ್ಯ ಇರುವುದಾಗಿ ಹೇಳಿದ್ದ ಆರೋಪಿಗಳು, ತಮ್ಮದೇ ಕಾರಿನಲ್ಲಿ ರೌಡಿಯನ್ನು ಕರೆದುಕೊಂಡು ಹೋಗಿದ್ದರು.’

‘ಕಾರಿನಲ್ಲೇ ಚಾಕುವಿನಿಂದ ಇರಿದು ಕೊಂದಿದ್ದ ಆರೋಪಿಗಳು, ಮತ್ತೂರು ಬಳಿ ಮೃತದೇಹ ಬಿಸಾಡಿ ಹೋಗಿದ್ದರು. ಈಗ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಇನ್ನೊಬ್ಬ ತಲೆಮರೆಸಿಕೊಂಡಿದ್ದಾನೆ’ ಎಂದೂ ಪೊಲೀಸರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು