ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಆರೋಗ್ಯ ವಿಚಾರಿಸಲು ಬಂದ ಬಾವನನ್ನೇ ಕೊಲೆ ಮಾಡಿದ ಬಾಮೈದ

Published : 9 ಸೆಪ್ಟೆಂಬರ್ 2024, 21:24 IST
Last Updated : 9 ಸೆಪ್ಟೆಂಬರ್ 2024, 21:24 IST
ಫಾಲೋ ಮಾಡಿ
Comments

ಬೆಂಗಳೂರು: ಆರೋಗ್ಯ ವಿಚಾರಿಸಲು ಮನೆಗೆ ಬಂದಿದ್ದ ಬಾವನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಹೊಸಗುಡ್ಡದ ಹಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ವೆಂಕಟಾಚಲಪತಿ (45) ಕೊಲೆಯಾದ ವ್ಯಕ್ತಿ. ಕೃತ್ಯ ಎಸಗಿದ ಬಾಮೈದ ವಿಶ್ವನಾಥ (45) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಮಲ್ಲೇಶ್ವರದ ಉಪ ನೋಂದಣಿ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿರುವ ವಿಶ್ವನಾಥ್, ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು. ಅಣ್ಣನ ಆರೋಗ್ಯದ ಕುರಿತು ತಂಗಿ ಹಾಗೂ ಅವರ ಪತಿ ವೆಂಕಟಾಚಲಪತಿ ಕಾಳಜಿ ತೋರಿಸುತ್ತಿದ್ದರು. ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಆರೋಗ್ಯ ವಿಚಾರಿಸಿ, ಔಷಧಿ ಕೊಟ್ಟು ಹೋಗಲು ಇಬ್ಬರೂ ಆರೋಪಿಯ ಮನೆ ಬಳಿ ಬಂದಿದ್ದರು. ಈ ವೇಳೆ ಆರೋಪಿ ಚಾಕುವಿನಿಂದ ವೆಂಕಟಾಚಲಪತಿಗೆ ಇರಿದು ಕೊಲೆ ಮಾಡಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಮಾಹಿತಿ ನೀಡಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT